Chief Editor
Manohar. R (Manu)
Photo Journalist
chitrataramanu@gmail.com
+91 9845549026
`ದಮಯಂತಿ` ಟೀಸರ್‌ಗೆ ಶಿವಕಾರ್ತಿಕೇಯನ್ ಮೆಚ್ಚುಗೆ
Posted date: 16 Mon, Sep 2019 – 09:37:44 AM

ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ‘ ಚಿತ್ರದ ಟೀಸರ್ ಇದೇ ತಿಂಗಳ 18 ರಂದು ಬಿದುಗಡೆಯಾಗಲಿದೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಖ್ಯಾತ ನಟ ಶಿವಕಾರ್ತಿಕೇಯನ್ ಅವರು ಈ ಚಿತ್ರದ ಟೀಸರ್ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ ಎಂದು ನವರಸನ್ ತಿಳಿಸಿದ್ದಾರೆ.

ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲ್ಲೇ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ.

ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧುಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ನ, ರವಿಗೌಡ, ಬಲರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ದಮಯಂತಿ` ಟೀಸರ್‌ಗೆ ಶಿವಕಾರ್ತಿಕೇಯನ್ ಮೆಚ್ಚುಗೆ - Chitratara.com
Copyright 2009 chitratara.com Reproduction is forbidden unless authorized. All rights reserved.