Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಬ್ರಹ್ಮಚಾರಿ` ಚಿತ್ರಕ್ಕೆ ಅದ್ದೂರಿ ಹಾಡಿನ ಚಿತ್ರೀಕರಣ
Posted date: 15 Tue, Oct 2019 09:36:42 AM

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ‘ಬ್ರಹ್ಮಾಚಾರಿ‘ ಚಿತ್ರಕ್ಕಾಗಿ ‘ಬಹದ್ದೂರ್‘ ಚೇತನ್ ಕುಮಾರ್ ಅವರು ಬರೆದಿರುವ ‘ಹಿಡ್ಕ ಹಿಡ್ಕ ವಸಿ ಹಿಡ್ಕ ಹಿಡ್ಕ, ತಡ್ಕ ತಡ್ಕ ವಸಿ ತಡ್ಕ ತಡ್ಕ‘ ಎಂಬ ಹಾಡಿನ ಚಿತ್ರೀಕರಣ ನೆಲಮಂಗಲ ಬಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ. ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಅವರು ನಿರ್ಮಿಸಿದ್ದ ಅದ್ದೂರಿ ಸೆಟ್‌ನಲ್ಲಿ ನಡೆದ ಈ ಹಾಡಿನ ಚಿತ್ರೀಕರಣದಲ್ಲಿ ನೀನಾಸಂ ಸತೀಶ್ ಹಾಗೂ ಅದಿತಿ ಪ್ರಭುದೇವ ಭಾಗವಹಿಸಿದ್ದರು. ಮುರಳಿ ನೃತ್ಯ ಸಂಯೋಜನೆ ಮಾಡಿದ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ.

ಯು ಕೆ ಮೆಹ್ತ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ‘ಡಬ್ಬಲ್ ಇಂಜಿನ್‘ ಹಾಗೂ ‘ಬಾಂಬೆ ಮಿಠಾಯಿ‘ ಚಿತ್ರಗಳನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಧರ್ಮವಿಶ್ ಸಂಗೀತ ನೀಡುತ್ತಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ನೀನಾಸಂ ಸಂತೀಶ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶಿವರಾಜ್ ಕೆ.ಆರ್.ಪೇಟೆ, ಅಶೋಕ್, ಅಕ್ಷತ, ಅಚ್ಯುತಕುಮಾರ್, ಪದ್ಮಜಾರಾವ್, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದ ಜೊತೆಗೆ ‘ಮಜಾಭಾರತ‘ದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಬ್ರಹ್ಮಚಾರಿ` ಚಿತ್ರಕ್ಕೆ ಅದ್ದೂರಿ ಹಾಡಿನ ಚಿತ್ರೀಕರಣ - Chitratara.com
Copyright 2009 chitratara.com Reproduction is forbidden unless authorized. All rights reserved.