Chief Editor
Manohar. R (Manu)
Photo Journalist
chitrataramanu@gmail.com
+91 9845549026
Present ಪ್ರಪಂಚ ``0 Percent ಲವ್`` 100 Percent ರೆಡಿಯಾಗಿದೆ
Posted date: 18 Wed, Mar 2020 12:09:23 PM

ಫ಼್ರೆಂಡ್ಸ್ ಮೀಡಿಯಾ ಪ್ರೋಡಕ್ಷನ್ಸ್ ಲಾಂಛನದಲ್ಲಿ ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಹೆಚ್.ಪಿ ಅವರು ನಿರ್ಮಿಸಿರುವ "

present ಪ್ರಪಂಚ 0 Percent `` ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದೆ. ಏಪ್ರಿಲ್‌ನಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ.

ಈ ಹಿಂದೆ `ಸಂಯುಕ್ತ 2` ಚಿತ್ರವನ್ನು ನಿರ್ದೇಶಿಸಿದ್ದ ಅಭಿರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಾಮಿಡಿ, ಲವ್, ಸೆಂಟಿಮೆಂಟ್ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಕೆ.ವಿ.ರವಿತೇಜಸ್ವಿ ಸಂಗೀತ ನೀಡಿದ್ದಾರೆ. ಈಶ್ವರಿ ಸುರೇಶ್ ಛಾಯಾಗ್ರಹಣ, ವೆಂಕಿ ಸಂಕಲನ, ಕುಂಫ಼ು ಚಂದ್ರು, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಹಾಗೂ ಹರಿಕೃಷ್ಣ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ.

ಈ ಹಿಂದೆ `ಕೆಮಿಸ್ತ್ರಿ ಕರಿಯಪ್` ಹಾಗೂ `ಸಂಯುಕ್ತ 2` ಚಿತ್ರದ ನಿರ್ಮಾಪಕರಾಗಿದ್ದ ಅರ್ಜುನ್ ಮಂಜುನಾಥ್ ಈ ಚಿತ್ರದ ನಾಯಕ. ರಂಗಭೂಮಿ ಹಿನ್ನೆಲೆಯ ಯಶಸ್ ಅಭಿ ಈ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಸಂಭ್ರಮ ಶ್ರೀ, ಅಕ್ಷತ ಈ ಚಿತ್ರದ ನಾಯಕಿಯರು.  ತಬಲನಾಣಿ, ಲಯೇಂದ್ರ, ಎಸ್.ನಾರಾಯಣ್, ಓಂಪ್ರಕಾಶ್‌ರಾವ್, ಚಂದನ್ ಆಚಾರ್, ಸಂಜನ, ಗೋವಿಂದೇಗೌಡ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

Kannada Cinema's Latest Wallpapers
Kannada Cinema's Latest Videos
Kannada Movie/Cinema News - Present ಪ್ರಪಂಚ ``0 Percent ಲವ್`` 100 Percent ರೆಡಿಯಾಗಿದೆ - Chitratara.com
Copyright 2009 chitratara.com Reproduction is forbidden unless authorized. All rights reserved.