ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಶುಗರ್ ಫ್ಯಾಕ್ಟರಿ ಚಿತ್ರದ ಚಿತ್ರೀಕರಣ ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬಿರುಸಿನಿಂದ ಸಾಗಿದೆ.
24 ದಿನಗಳ ಕಾಲ ಅದ್ದೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಯಲಿದೆ.
ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿಯರಾದ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ, ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರು ಈ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರದಲ್ಲಿ ಏಳು ಹಾಡುಗಳನ್ನು ಚೇತನ್ ಕುಮಾರ್ , ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆಯುತ್ತಿದ್ದಾರೆ ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನವಿರುವ `ಶುಗರ್ ಫ್ಯಾಕ್ಟರಿ` ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ.