Chief Editor
Manohar. R (Manu)
Photo Journalist
chitrataramanu@gmail.com
+91 9845549026
ಲೋಹಿತ್ ನಿರ್ದೇಶನದ`ಕ್ಯಾಪ್ಚರ್`ನಲ್ಲಿ ಪ್ರಿಯಾಂಕಾ ಮಗಳಾಗಿ ಮಾನ್ವಿತಾ ನಟನೆ
Posted date: 31 Tue, Oct 2023 01:35:52 PM
ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ `ಕ್ಯಾಪ್ಚರ್` ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ. 
 
ಕ್ಯಾಪ್ಚರ್ ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ  ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಲೋಹಿತ್ ನಿರ್ದೇಶನದ`ಕ್ಯಾಪ್ಚರ್`ನಲ್ಲಿ ಪ್ರಿಯಾಂಕಾ ಮಗಳಾಗಿ ಮಾನ್ವಿತಾ ನಟನೆ - Chitratara.com
Copyright 2009 chitratara.com Reproduction is forbidden unless authorized. All rights reserved.