Chief Editor
Manohar. R (Manu)
Photo Journalist
chitrataramanu@gmail.com
+91 9845549026
ಫೆಬ್ರವರಿ 2 ರಂದು ಯತಿರಾಜ್ ನಿರ್ದೇಶನದ``ಸತ್ಯಂ ಶಿವಂ``ಬಿಡುಗಡೆ
Posted date: 24 Wed, Jan 2024 05:53:52 PM
ಪತ್ರಕರ್ತ ಹಾಗೂ ಕಲಾವಿದ ಯತಿರಾಜ್  ನಿರ್ದೇಶನದ "ಸತ್ಯಂ ಶಿವಂ" ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ ಈಗಾಗಲೇ ಜನಪ್ರಿಯವಾಗಿದೆ. 

ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಿದ ನಿರ್ದೇಶಕ ಯತಿರಾಜ್ , ವಿಭಿನ್ನ ಕಥಾಹಂದರ ಹೊಂದಿರುವ "ಸತ್ಯಂ ಶಿವಂ" ಚಿತ್ರ ಫೆಬ್ರವರಿ 2ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದ ನಿರ್ಮಾಪಕ ಬುಲೆಟ್ ರಾಜು ಅವರೆ ನಾಯನಾಗೂ ನಟಿಸಿದ್ದಾರೆ. ಸಂಜನ ನಾಯ್ಡು ಈ ಚಿತ್ರದ ನಾಯಕಿ. ಮೈಕೋ ನಾಗರಾಜ್, ಬಾಲ ರಾಜವಾಡಿ, ಅರವಿಂದ್ ರಾವ್, ಸಂಗೀತ, ಸುಂದರಶ್ರೀ, ತೇಜಸ್ವಿನಿ, ತನುಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಾನು ಕೂಡ ನಟಿಸಿದ್ದೇನೆ. ವಿದ್ಯಾ ನಾಗೇಶ್ ಛಾಯಾಗ್ರಹಣ, ವಿ.ಮನೋಹರ್ ಸಂಗೀತ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಸಸ್ಪೆನ್ಸ್, ಸೆಂಟಿಮೆಂಟ್, ಥ್ರಿಲ್ಲರ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಫೆಬ್ರವರಿ 2 ರಂದೆ ತೆರೆಗೆ ಬರುತ್ತಿರುವ ನಮ್ಮ ಚಿತ್ರವನ್ನು ನೋಡಿ. ಪ್ರೋತ್ಸಾಹ ನೀಡಿ ಎಂದರು.     

 ನಾನು ಈ ಹಿಂದೆ ಬಿಕ್ಷುಕ ಎಂಬ ಸಿನಿಮಾ ಮಾಡಿದ್ದೆ. ಇದು ಎರಡನೇ ಸಿನಿಮಾ.‌ ಯತಿರಾಜ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಸೆನ್ಸಾರ್ ಮಂಡಳಿ ಯಾವುದೇ ಕಟ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ ಎಂದು ತಿಳಿಸಿದ ನಿರ್ಮಾಪಕ ಮತ್ತು ನಾಯಕ ಬುಲೆಟ್ ರಾಜು, ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು.  

ನಾಯಕಿ ಸಂಜನಾ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ ಈ ಚಿತ್ರದ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ ಎಂದರು. ಛಾಯಾಗ್ರಾಹಕ ವಿದ್ಯಾ ನಾಗೇಶ್, ಸಹ ನಿರ್ದೇಶಕರಾದ ಅರುಣ್ ಕುಮಾರ್ ಮತ್ತು ಸೋನು ಸಾಗರ ,  ಮುಂತಾದ ತಂತ್ರಜ್ಞರು ಹಾಗೂ ಕಲಾವಿದರು "ಸತ್ಯಂ ಶಿವಂ" ಬಗ್ಗೆ ಮಾತನಾಡಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಫೆಬ್ರವರಿ 2 ರಂದು ಯತಿರಾಜ್ ನಿರ್ದೇಶನದ``ಸತ್ಯಂ ಶಿವಂ``ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.