ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ.ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.
ಬಿಗ್ ಬಾಸ್ ಕನ್ನಡ ಸೀಸನ್ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪೋಸ್ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.