Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕಲ್ಕಿ 2898 AD ಚಿತ್ರದ ಭೈರವ ಆಂಥಮ್‌ ರಿಲೀಸ್‌
Posted date: 18 Tue, Jun 2024 09:34:04 AM
ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ `ಕಲ್ಕಿ 2898 AD` ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ಅವರು ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ. 

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. 

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ `ಕಲ್ಕಿ 2898 AD` ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. `ಕಲ್ಕಿ 2898 AD` ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕಲ್ಕಿ 2898 AD ಚಿತ್ರದ ಭೈರವ ಆಂಥಮ್‌ ರಿಲೀಸ್‌ - Chitratara.com
Copyright 2009 chitratara.com Reproduction is forbidden unless authorized. All rights reserved.