Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅಪಾರ ವೆಚ್ಚದಲ್ಲಿ ?ಬುಲ್‌ಬುಲ್ ಹಾಡು
Posted date: 31 Thu, Jan 2013 ? 09:46:51 AM

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಕಾಣಿಕೆ ‘ಬುಲ್‌ಬುಲ್ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ ‘ಜ್ಯೂನಿಯರ್ ಸೀನಿಯರ್ ಅರರೆ ಜ್ಯೂನಿಯರ್ ಹೇಳಪ್ಪಾ ಸೀನಿಯರ್ ಎಂಬ ಹಾಡಿನ ಚಿತ್ರೀಕರಣ ನಗರದ ಅರಮನೆ ಆವರಣ, ಅಭಿಮಾನ್ ಸ್ಟುಡಿಯೋ, ಮೀನಾಕ್ಷಿಮಾಲ್ ಮುಂತಾದಕಡೆ ನಡೆದಿದೆ. ರೆಬಲ್‌ಸ್ಟಾರ್ ಅಂಬರೀಶ್, ಚಾಲೆಂಜಿಂಗ್‌ಸ್ಟಾರ್ ದರ್ಶನ್ ಹಾಗೂ ನೂರಕ್ಕೂ ಅಧಿಕ ನರ್ತಕರು ಅಭಿನಯಿಸಿದ ಈ ಹಾಡಿಗೆ ಹರ್ಷ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಮಾರು ಎಂಭತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಆರು ದಿನಗಳ ಕಾಲ ಈ ಹಾಡಿನ ಚಿತ್ರೀಕರಣ ನಡೆದಿದೆ.
     ತೂಗುದೀಪ ಪ್ರೊಡಕ್ಷನ್ಸ್‌ನ ನಿರ್ಮಾಪಕರಾದ ಶ್ರೀಮತಿ ಮೀನಾತೂಗುದೀಪಶ್ರೀನಿವಾಸ್ ‘ಬುಲ್‌ಬುಲ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದಿನಕರ್ ತೂಗುದೀಪ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸಂಸ್ಥೆಯ ಮೂರನೇ ಕಾಣಿಕೆಯಾದ ಈ ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶಿಸುತ್ತಿದ್ದಾರೆ.  
    ವಿ.ಹರಿಕೃಷ್ಣ ‘ಬುಲ್‌ಬುಲ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕವಿರಾಜ್ ಗೀತರಚನೆ ಮಾಡುವುದರೊಂದಿಗೆ ಸಂಭಾಷಣೆಯನ್ನೂ ಬರೆದಿದ್ದಾರೆ. ಖ್ಯಾತ ಛಾಯಾಗ್ರಾಹಕ ಕೃಷ್ಣಕುಮಾರ್(ಕೆ ಕೆ) ಅವರ ಛಾಯಾಗ್ರಹಣ, ಸೌಂದರರಾಜ್ ಸಂಕಲನ, ಮಲ್ಲಿಕಾರ್ಜುನ್(ಗದಗ) ಸಹನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ರಂಗಸ್ವಾಮಿ, ಸುಂದರರಾಜ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅಂಬರೀಶ್, ದರ್ಶನ್, ರಚಿತರಾಂ, ಅಶೋಕ್, ಚಿತ್ರಾಶೆಣೈ, ಶರಣ್, ರಮೇಶ್‌ಭಟ್, ಸಿಹಿಕಹಿ ಚಂದ್ರು, ಸಾಧುಕೋಕಿಲಾ, ಟೆನ್ನಿಸ್‌ಕೃಷ್ಣ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಪಾರ ವೆಚ್ಚದಲ್ಲಿ ?ಬುಲ್‌ಬುಲ್ ಹಾಡು - Chitratara.com
Copyright 2009 chitratara.com Reproduction is forbidden unless authorized. All rights reserved.