Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಗೂಗ್ಲಿ` ಈ ವಾರ ತೆರೆಗೆ
Posted date: 15 Mon, Jul 2013 – 09:10:50 AM

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ‘ಗೂಗ್ಲಿ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರು, ಸಕಲೇಶಪುರ, ಮೂಡಬಿದಿರೆ, ಮಂಗಳೂರು ಮುಂತಾದಕಡೆ ಚಿತ್ರೀಕರಣ ನಡೆದಿದೆ.
ಯಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಕೃತಿಖರಬಂದ. ಅನಂತ್‌ನಾಗ್, ಸುಧಾಬೆಳವಾಡಿ, ಸಾಧುಕೋಕಿಲಾ, ನೀನಾಸಂ ಅಶ್ವತ್ ಮುಂತಾದವರು ‘ಗೂಗ್ಲಿ ಚಿತ್ರದ ತಾರಾಬಳಗದಲ್ಲಿದ್ದಾರೆ.
ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋಶ್ವಶ್ರೀಧರ್ ಸಂಗೀತ ನೀಡಿದ್ದಾರೆ. ಸನತ್ ಸುರೇಶ್ ಸಂಕಲನ, ಪಳನಿರಾಜ್, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಪವನ್ ಒಡೆಯರ್, ಯೋಗರಾಜ್‌ಭಟ್, ಜಯಂತಕಾಯ್ಕಿಣಿ, ಕವಿರಾಜ್ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಗೂಗ್ಲಿ` ಈ ವಾರ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.