Chief Editor
Manohar. R (Manu)
Photo Journalist
chitrataramanu@gmail.com
+91 9845549026
`ರೆಬಲ್` ಸಿದ್ದ
Posted date: 05 Tue, Nov 2013 – 01:28:08 PM

ಮೈಸೂರು ಡ್ರೀಮ್ ಮರ್ಚೆಂಟ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ ‘ರೆಬಲ್ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂದಲಿ ಯುಎ ಅರ್ಹತಾಪತ್ರವನ್ನು ನೀಡಿದೆ.  ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಕರುನಾಡ ಸುಂದರ ತಾಣಗಳಲ್ಲಿ ಚಿತ್ರಕ್ಕೆ ಚಿತ್ರೀಕರಣ ನಡೆದಿದೆ. ಸಿಂಗಾಪುರದಲ್ಲಿ ನಲವತ್ತಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿರುವುದು ವಿಶೇಷ. ಎಸ್.ವಿ.ರಾಜೇಂದ್ರಸಿಂಗ್‌ಬಾಬು ನಿರ್ದೇಶನದ ಈ ಚಿತ್ರದ ನಾಯಕರಾಗಿ ಆದಿತ್ಯ ಅಭಿನಯಿಸಿದ್ದಾರೆ. ಸಂಜನಾ, ದೀಪಿಕಾರಾವ್, ಶರತ್‌ಲೋಹಿತಾಶ್ವಾ, ರಾಮಕೃಷ್ಣ, ಅವಿನಾಶ್, ಸುಹಾಸಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
     ನಿರ್ದೇಶಕರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸೆಲ್ವರಾಜ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೆಸಿಗಿಫ಼್ಟ್ ಸಂಗೀತ ನೀಡಿದ್ದಾರೆ. ರವಿವರ್ಮ ಹಾಗೂ ಡಿಫ಼ರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿರುವ ‘ರೆಬಲ್ಗೆ ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ.
ಮುಂದಿನ ವಾರ ‘ಅಂಬರ’ ತೆರೆಗೆ

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ರೆಬಲ್` ಸಿದ್ದ - Chitratara.com
Copyright 2009 chitratara.com Reproduction is forbidden unless authorized. All rights reserved.