ಕೆ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ರವಿಕುಮಾರ್ ಹಾಗೂ ಅಶೋಕ್ ಶಿರಾಲಿ ಅವರು ನಿರ್ಮಿಸುತ್ತಿರುವ `ಕೊಡೆ ಮುರುಗ` ಚಿತ್ರದ ಹಾಡಿಗೆ ಲೂಸ್ ಮಾದ ಯೋಗಿ ಹೆಜ್ಜೆ ಹಾಕಿದ್ದಾರೆ. ಸುಬ್ರಮಣ್ಯ ಪ್ರಸಾದ್ ಅವರು ಬರೆದಿರುವ `ಕೋಳಿ ಕಾಲಿಗೆ ಗೆಜ್ಜೆ ಕಟ್ಟಿದ್ರೆ` ಎಂಬ ಹಾಡಿನಲ್ಲಿ ಯೋಗಿ ಅಭಿನಯಿಸಿದ್ದಾರೆ. ಲೂಸ್ ಮಾದ ಯೋಗಿ ಹಾಗೂ ಮುನಿಕೃಷ್ಣ ನಟಿಸಿರುವ ಈ ಹಾಡಿಗೆ ಸ್ಟಾರ್ ಗಿರಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಕೈಲಾಶ್ ಖೇರ್ ಈ ಹಾಡನ್ನು ಹಾಡಿದ್ದಾರೆ.
ಸುಬ್ರಮಣ್ಯ ಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರುದ್ರಮುನಿ ಬೆಳಗೆರೆ ಅವರ ಛಾಯಾಗ್ರಹಣವಿದೆ. ತ್ಯಾಗರಾಜ್ ಸಂಗೀತ ನಿರ್ದೇಶನ, ಸಿ.ರವಿಚಂದ್ರನ್ ಸಂಕಲನ, ಭೂಷಣ್, ಸ್ಟಾರ್ ಗಿರಿ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಮುನಿಕೃಷ್ಣ, ಸುಬ್ರಮಣ್ಯ ಪ್ರಸಾದ್, ಪಲ್ಲವಿ ಗೌಡ, ಸ್ವಾತಿ ಗುರುದತ್, ಅರವಿಂದ ರಾವ್, ಅಸೋಕ್ ಶರ್ಮ, ರಾಕ್‌ಲೈನ್ ಸುಧಾಕರ್, ಸ್ವಯಂವರ ಚಂದ್ರು, ಮೋಹನ್ ಜುನೇಜ, ಕುರಿ ಪ್ರತಾಪ್, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅತಿಥಿ ಪಾತ್ರದಲ್ಲಿ ಲೂಸ್ ಮಾದ ಯೋಗಿ ಅಭಿನಯಿಸಿದ್ದಾರೆ.