Chief Editor
Manohar. R (Manu)
Photo Journalist
chitrataramanu@gmail.com
+91 9845549026
`ವೀರಪುತ್ರ`ನಿಗೆ ಜ್ಯೂಡಾ ಸ್ಯಾಂಡಿ ಸಂಗೀತ.
Posted date: 15 Sun, Nov 2020 – 05:25:13 PM

ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಯಾದ ' ಸಪ್ಲಿಮೆಂಟರಿ ' ಚಿತ್ರ ವಿಮರ್ಶಕರ ಹಾಗೂ ನೋಡುಗರ ಮನಗೆದ್ದಿತ್ತು.. ಆ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಿರ್ಮಾಪಕರಾದ ಗುರು ಬಂಡಿ‌ ಹಾಗೂ ನಿರ್ದೇಶಕ ಡಾ|| ದೇವರಾಜ್ ಅವರ ಕಾಂಬಿನೇಶನ್ ನಲ್ಲಿ ' ವೀರಪುತ್ರ ' ಚಿತ್ರ ನಿರ್ಮಾಣವಾಗುತ್ತಿದೆ..

 ತನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರದ ನಾಯಕರಾಗಿ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೊ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.
ಯುವ ಸಂಗೀತ ನಿರ್ದೇಶಕ ಜ್ಯೂಡಾ ಸ್ಯಾಂಡಿ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ  ಸಂಗೀತ ನೀಡಲಿರುವ  ಜ್ಯೂಡಾ ಸ್ಯಾಂಡಿ ಅವರು ಸಂಗೀತ ರಸಿಕರಿಗೆ ಮನೋರಂಜನೆಯ ರಸದೌತಣ ನೀಡುವುದಾಗಿ ಹೇಳಿದ್ದಾರೆ.
ಡಿಸೆಂಬರ್ ನಲ್ಲಿ ವೀರಪುತ್ರ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ವೀರಪುತ್ರ`ನಿಗೆ ಜ್ಯೂಡಾ ಸ್ಯಾಂಡಿ ಸಂಗೀತ. - Chitratara.com
Copyright 2009 chitratara.com Reproduction is forbidden unless authorized. All rights reserved.