Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅಸತೋಮ ಸದ್ಗಮಯ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆ
Posted date: 01 Thu, Mar 2018 06:26:15 PM
ರಂಗಿತರಂಗ ಬೆಡಗಿ ರಾಧಿಕಾ ಚೇತನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಅಸತೋಮ ಸದ್ಗಮಯ ಕನ್ನಡ ಚಲನಚಿತ್ರದ ಟೀಸರ್ ಇತ್ತೀಚೆಗೆ ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಟೀಸರ್ ವೀಕ್ಷಿಸಿದ ಕಾಲೇಜ್ ಸ್ಟೂಡೆಂಡ್‌ಗಳಿಂದ ಟೀಸರ್‌ಗೆ ಉತ್ತಮ ಪ್ರತಿಕ್ರೀಯೆ ದೊರೆಯಿತು. ಈ ಚಿತ್ರದ ಟೀಸರ್ ಆನಂದ್ ಆಡಿಯೋ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿದ್ದು ವೀಕ್ಷಕರಲ್ಲಿ ಚಿತ್ರದ ಬಗ್ಗೆ ಕುತೂಹಲ ಮೂಡಿಸುತ್ತಿದೆ. ಇದು ಈ ಚಿತ್ರದ ಮೊದಲ ಟೀಸರ್ ಆಗಿದ್ದು, ಟೀಸರ್‌ಗೆ ಉತ್ತಮ ಪ್ರತಿಕ್ರೀಯೆ ದೊರೆಯುತ್ತಿರುವುದರಿಂದ ಚಿತ್ರತಂಡ ಫುಲ್ ಖುಷಿಯಾಗಿದೆ. 
 
ಅಸತೋಮ ಸದ್ಗಮಯ ಚಿತ್ರವು ಸಂಪೂರ್ಣ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಸಿನೆಮಾವಾಗಿದ್ದು, ಈ ಚಿತ್ರದಲ್ಲಿ ರಾಧಿಕಾ ಚೇತನ್ ಜೊತೆಗೆ ಬಿಗ್‌ಬಾಸ್ ಖ್ಯಾತಿಯ ಲಾಸ್ಯ ಹಾಗೂ ಕಿನ್ನರಿ ಸೀರಿಯಲ್ ಖ್ಯಾತಿಯ ಕಿರಣ್‌ರಾಜ್ ಪ್ರಮುಖ ಭೂಮಿಕೆಯಲ್ಲಿದ್ದಾರೆ. ಈ ಚಿತ್ರದ ಆಡಿಯೋ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆಸತೋಮ ಸದ್ಗಮಯ ಚಿತ್ರವನ್ನ ಐಕೇರ್ ಬ್ಯಾನರಿನಡಿಯಲ್ಲಿ ಆಶ್ವಿನ್ ಪಿರೇರಾರವರು ನಿರ್ಮಿಸುತ್ತಿದ್ದು, ರಾಜೇಶ್ ವೇಣೂರುರವರು ನಿರ್ದೇಶಿಸುತ್ತಿದ್ದಾರೆ.
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಸತೋಮ ಸದ್ಗಮಯ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.