Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಶಾರ್ದೂಲ
Posted date: 09 Tue, Jun 2020 02:52:32 PM

ಭೈರವ  ಸಿನಿಮಾಸ್ ಲಾಂಛನದಲ್ಲಿ ಕಲ್ಯಾಣ್ ಸಿ ಹಾಗೂ ರೋಹಿತ್ .ಎಸ್
ಅವರು ನಿರ್ಮಿಸಿರುವ ಶಾರ್ದೂಲ ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ.
ಕೊರೋನ  ಹಾವಳಿಯಿಂದ ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಅನುಮತಿ ‌ದೊರಕಿದ ಕೂಡಲೆ ಚಿತ್ರವನ್ನು ತೆರೆಗ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ...
ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲ್ಲರ್ ಕೂಡ ವಿಭಿನ್ನವಾಗಿದ್ದು,  ಸದ್ಯದಲ್ಲೇ ಬಿಡುಗಡೆಯಾಗಲಿದೆ...
ನಮ‌್ ಏರಿಯಲ್ಲೊಂದು‌ ದಿನ, ತುಘಲಕ್ ಹಾಗೂ ಹುಲಿರಾಯ ಚಿತ್ರಗಳನ್ನು ನಿರ್ದೇಶಿಸಿರುವ ಅರವಿಂದ್ ಕೌಶಿಕ್ ಈ ಚಿತ್ರದ ನಿರ್ದೇಶಕರು. ಇವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.. ದೆವ್ವ ಇರಬಹುದ್ದಾ? ಎಂಬ ಅಡಿಬರಹ ಈ ಚಿತ್ರಕ್ಕಿದೆ.
ವೈ.ಜಿ.ಆರ್ ಮನು ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ ಹಾಗು ಮಾಸ್ ಮಾದ, ಅಲ್ಟಿಮೇಟ್ ಶಿವ ಅವರ‌ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ..
ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ..
ಅಮೇಜನ್ ಮತ್ತು ನೆಟ್ ಫ್ಲಿಕ್ಸ್ ಸಂಸ್ಥೆ ಗಳಿಗೂ ಚಿತ್ರವನ್ನು ಕಳುಹಿಸಿಕೊಡಲಾಗಿದ್ದು,  ಆ ಮಾಧ್ಯಮದಲ್ಲೂ ನಮ್ಮ ಚಿತ್ರ ವೀಕ್ಷಣೆಗೆ ಅನುಮತಿ ದೊರಕುವ ನಿರೀಕ್ಷೆಯಿದೆ ಎನ್ನುತ್ತಾರೆ ನಿರ್ಮಾಪಕರು..

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಶಾರ್ದೂಲ - Chitratara.com
Copyright 2009 chitratara.com Reproduction is forbidden unless authorized. All rights reserved.