Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಅನುಷ್ಕ` ಮೇ 10 ರಂದು ತೆರೆಗೆ
Posted date: 25 Thu, Apr 2019 09:57:30 AM

ಶ್ರೀನಂಜುಂಡೇಶ್ವರ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಎಸ್.ಕೆ.ಗಂಗಾಧರ್ ಅವರು ನಿರ್ಮಿಸಿರುವ ‘ಅನುಷ್ಕ‘ ಚಿತ್ರ ಮೇ 10ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಮೇ ೩ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ದೇವರಾಜ್ ಕುಮಾರ್ ತಿಳಿಸಿದ್ದಾರೆ.
ದೇವರಾಜ್‌ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಅರಸಿಕೆರೆ ಹಾಗೂ ಬ್ಯಾಂಕಾಕ್‌ನಲ್ಲಿ ಚಿತ್ರಕ್ಕೆ 72ದಿನಗಳ ಚಿತ್ರೀಕರಣ ನಡೆದಿದೆ.
ವೀನಸ್ ಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿಕ್ರಂ ಸೆಲ್ವ ಸಂಗೀತ ನಿರ್ದೇಶನವಿದೆ. ಶ್ರೀಧರ್ ಸಂಕಲನ, ಅಶೋಕ್, ಸಿದ್ದಾರಾಜು, ನರಸಿಂಹ, ಚಂದ್ರು ಸಾಹಸ ನಿರ್ದೇಶನ, ಅವಿನ್ ನೃತ್ಯ ನಿರ್ದೇಶನ ಹಾಗೂ ಬಾಬುಖಾನ್ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಧುಕೋಕಿಲ, ರೂಪೇಶ್ ಶೆಟ್ಟಿ, ಅಮೃತ, ರೂಪ ಶರ್ಮ, ಬಾಲರಾಜ್, ಆದಿಲೋಕೇಶ್ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಅನುಷ್ಕ` ಮೇ 10 ರಂದು ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.