Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಅರ್ಜುನ್ ಗೌಡ`ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ ಬಾಕ್ಸರ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
Posted date: 10 Tue, Sep 2019 08:40:36 AM

ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ ‘ಅರ್ಜುನ್ ಗೌಡ‘ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ವಿದೇಶದಲ್ಲಿ ನಡೆಯುವ ಕೆಲವು ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಆ ಭಾಗದ ಚಿತ್ರೀಕರಣ ಮಾಸಾಂತ್ಯಕ್ಕೆ ನಡೆಯಲಿದೆ. ಅಕ್ಟೋಬರ್ ಮೊದಲವಾರದಲ್ಲಿ ಆಡಿಯೋ ರಿಲೀಸ್ ಆಗಲಿದೆ.

ಪ್ರಜ್ವಲ್ ದೇವರಾಜ್ ಈ ಚಿತ್ರದ ನಾಯಕಾರಾಗಿ ನಟಿಸುತ್ತಿದ್ದು, ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಬಾಕ್ಸರ್ ಪಾತ್ರ ನಿರ್ವಹಿಸುತ್ತಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಧರ್ಮವಿಶ್ ಅವರ ಸಂಗೀತ ನಿರ್ದೇಶನವಿದೆ. ಜೈಆನಂದ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
 

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಅರ್ಜುನ್ ಗೌಡ`ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ ಬಾಕ್ಸರ್ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್ - Chitratara.com
Copyright 2009 chitratara.com Reproduction is forbidden unless authorized. All rights reserved.