Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಕಾಣದಂತೆ ಮಾಯವಾದನು` ಚಿತ್ರದ ಟ್ರೇಲರ್‌ಗೆ ಪುನೀತ್‌ರಾಜಕುಮಾರ್ ಮೆಚ್ಚುಗೆ
Posted date: 21 Sun, Jul 2019 11:13:40 AM

ಬ್ಯಾಕ್ ಬೆಂಚರ್ಸ್ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಚಂದ್ರಶೇಖರ್ ನಾಯ್ಡು, ಸೋಮ್ ಸಿಂಗ್ ಹಾಗೂ ಪುಷ್ಪ ಸೋಮ್ ಸಿಂಗ್ ಅವರು ನಿರ್ಮಿಸಿರುವ ‘ಕಾಣದಂತೆ ಮಾಯವಾದನು‘ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಟ್ರೇಲರ್ ವೀಕ್ಷಿಸಿರುವ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ರಾಜ್ ಪ್ರತಿಪಾಠಿ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಕರ್ನಾಟಕದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ.

ಸುಜ಼್ಞಾನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿಜಯ್ ಗುಮೆನೇನಿ ಸಂಗೀತ ನೀಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವಿನೋದ್ ಸಾಹಸ ನಿರ್ದೇಶನ, ಧನು ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಉಮೇಶ್ ಹಾಗೂ ಸರವಣ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಈ ಹಿಂದೆ ‘ಜಯಮ್ಮನ ಮಗ‘ ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್ ಈ ಚಿತ್ರದ ಮೂಲಕ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಿಂಧು ಲೋಕನಾಥ್ ಈ ಚಿತ್ರದ ನಾಯಕಿ. ಅಚ್ಯುತಕುಮಾರ್, ವಿನಯಪ್ರಸಾದ್, ಸುಚೇಂದ್ರ ಪ್ರಸಾದ್, ರಾಘವ್ ಉದಯ್, ಭಜರಂಗಿ ಲೋಕಿ, ಧರ್ಮಣ್ಣ, ಸೀತಾ ಕೋಟೆ, ಸನ್ನಿ ಮಹಿಪಾಲ್, ಬಾಬು ಹಿರಣ್ಣಯ್ಯ, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕಾಣದಂತೆ ಮಾಯವಾದನು` ಚಿತ್ರದ ಟ್ರೇಲರ್‌ಗೆ ಪುನೀತ್‌ರಾಜಕುಮಾರ್ ಮೆಚ್ಚುಗೆ - Chitratara.com
Copyright 2009 chitratara.com Reproduction is forbidden unless authorized. All rights reserved.