Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಗೀತಾ` ನಾಳೆಯಿಂದ ತೆರೆಗೆ
Posted date: 26 Thu, Sep 2019 11:15:32 AM

ಎಸ್.ಎಸ್.ಫ಼ಿಲಂಸ್ ಹಾಗೂ ಗೋಲ್ಡನ್ ಮೂವೀಸ್ ಮೂಲಕ ಸೈಯದ್ ಸಲಾಂ ಹಾಗೂ ಶಿಲ್ಪಾಗಣೇಶ್ ಅವರು ನಿರ್ಮಿಸಿರುವ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ‘ಗೀತಾ‘ ಚಿತ್ರ ನಾಳೆಯಿಂದ  ಬಿಡುಗಡೆಯಾಗುತ್ತಿದೆ.

`ಮಿಸ್ಟರ್ & ಮಿಸ್ಸಸ್ ರಾಮಾಚಾರಿ ಹಾಗೂ `ರಾಜಕುಮಾರ ಚಿತ್ರಗಳಿಗೆ ಸಂತೋಷ್ ಆನಂದರಾಮ್ ಅವರ ಜೊತೆ ಕಾರ್ಯ ನಿರ್ವಹಿಸಿ ಅನುಭವವಿರುವ ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ನಾಗೇಂದ್ರ ಬಿ.ಎಂ ಸಂಭಾಷಣೆ ಬರೆದಿದ್ದಾರೆ. ಆರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ರುಬೆನ್ಸ್ ಸಂಗೀತ ನೀಡಿದ್ದಾರೆ. ಶ್ರೀಶ ಕೂದುವಳ್ಳಿ ಛಾಯಾಗ್ರಹಣ, ಜ಼್ಞಾನೇಶ್ ಬಿ ಮಠದ್ ಸಂಕಲನ, ಶಿವಕುಮಾರ್, ವಿಶ್ವಾಸ್ ಕಶ್ಯಪ್ ಕಲಾ ನಿರ್ದೆಶನ, ವಿಜಯ್ ಮಾಸ್ಟರ್ ಹಾಗೂ ವಿನೋದ್ ಸಾಹಸ ನಿರ್ದೇಶನ ಮತ್ತು ಭೂಷಣ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ನಾಯಕಿಯರಾಗಿ ಕೇರಳದ ಪಾರ್ವತಿ ಅರುಣ್, ಪ್ರಯಾಗ ಮಾಲ್ಟಿನ್ ಹಾಗೂ ಶಾನ್ವಿ ಶ್ರೀವಾಸ್ತವ್ ಅಭಿನಯಿಸಿದ್ದಾರೆ. ಸುಧಾರಾಣಿ, ದೇವರಾಜ್, ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.   

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಗೀತಾ` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.