Chief Editor
Manohar. R (Manu)
Photo Journalist
chitrataramanu@gmail.com
+91 9845549026
`ವೀಕ್ ಎಂಡ್`ಗೆ ಐವತ್ತು ದಿನಗಳ ಸಂಭ್ರಮ
Posted date: 21 Sun, Jul 2019 – 11:17:04 AM

 ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ ‘ವೀಕ್ ಎಂಡ್‘ ಚಿತ್ರ ಬೆಂಗಳೂರಿನ ಕಾಮಾಕ್ಯ ಹಾಗೂ ಸಪ್ನ ಚಿತ್ರಮಂದಿರಗಳಲ್ಲಿ ಐವತ್ತು ದಿನಗಳನ್ನು ಪೂರೈಸಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.   


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ವೀಕ್ ಎಂಡ್`ಗೆ ಐವತ್ತು ದಿನಗಳ ಸಂಭ್ರಮ - Chitratara.com
Copyright 2009 chitratara.com Reproduction is forbidden unless authorized. All rights reserved.