Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಸಿಂಗ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 18 Thu, Jul 2019 11:51:49 AM

ಯು ಕೆ ಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ ‘ಸಿಂಗ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಹಿಂದೆ ‘ರಾಮ್‌ಲೀಲಾ‘ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಡಾ||ಕೆ.ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ, ಗಣೇಶ್ ಸಂಕಲನ ಹಾಗೂ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಡಾ||ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ ‘ಸಿಂಗ‘ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಸಿಂಗ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.