ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ ‘ಅರ್ಜುನ್ ಗೌಡ‘ ಚಿತ್ರದ ಟೀಸರ್ ಆಗಸ್ಟ್ ೨ರಂದು ಬಿಡುಗಡೆಯಾಗಲಿದೆ. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ಕಾರಾವಾರ ಮುಂತಾದ ಕಡೆ ೭೦ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿದೆ. ವಿದೇಶದಲ್ಲಿ ನಡೆಯಬೇಕಿರುವ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ.
ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಧರ್ಮವಿಶ್ ಅವರ ಸಂಗೀತ ನಿರ್ದೇಶನವಿದೆ. ಜೈಆನಂದ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.