Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Posted date: 11 Sun, Oct 2020 05:23:20 PM

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ.
ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.
 ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ  ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ  ನವೀನ್ ಆರ್ ಸಿ ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.
ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ.
ಬಹುಭಾಷ ನಟಿ  ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ
ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್,  ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ - Chitratara.com
Copyright 2009 chitratara.com Reproduction is forbidden unless authorized. All rights reserved.