Chief Editor
Manohar. R (Manu)
Photo Journalist
chitrataramanu@gmail.com
+91 9845549026
ಟಗರು ಚಿತ್ರದ ಚಿತ್ರೀಕರಣ ಪೂರ್ಣ
Posted date: 09 Sat, Dec 2017 11:00:38 AM
 ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ, ಸೂರಿ ನಿರ್ದೇಶನದ ‘ಟಗರು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಗವಿಪುರಂನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಕುಂಬಳಕಾಯಿ ಒಡೆಯುವುದರ ಮೂಲಕ ಚಿತ್ರದ ಚಿತ್ರೀಕರಣ ಪೂರ್ಣವಾಯಿತು. 
ಸೂರಿ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವೀನಸ್ ಎಂಟರ್ ಟೈನರ್ ಮೂಲಕ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ.  ಚರಣ್‌ರಾಜ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ  ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಸುರೇಶ್ ಕಲಾ ನಿರ್ದೇಶನ, ಸೂರಿ ನೃತ್ಯ ನಿರ್ದೇಶನ ಹಾಗೂ ಸೂರಿ, ಜಾಲಿ ಬಾಸ್ಟಿನ್, ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್ ಬರೆದಿದ್ದಾರೆ.
ಶಿವರಾಜಕುಮಾರ್, ಮಾನ್ವಿತಾ ಹರೀಶ್, ಭಾವನಾರಾವ್, ಧನಂಜಯ್, ದೇವರಾಜ್, ವಸಿಷ್ಠ ಸಿಂಹ, ಅಚ್ಯುತ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಟಗರು ಚಿತ್ರದ ಚಿತ್ರೀಕರಣ ಪೂರ್ಣ - Chitratara.com
Copyright 2009 chitratara.com Reproduction is forbidden unless authorized. All rights reserved.