Chief Editor
Manohar. R (Manu)
Photo Journalist
chitrataramanu@gmail.com
+91 9845549026
ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಆರಂಭ
Posted date: 08 Thu, Mar 2018 03:38:01 PM
ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಶ್ರೀಮತಿ ಮಾನಸ ತರುಣ್ ನಿರ್ಮಿಸುತ್ತಿರುವ ‘ಪ್ರೊಡಕ್ಷನ್ ನಂ ೩‘ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯಿರುವ ಗಣೇಶನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ಮಾನಸ ತರುಣ್ ಆರಂಭ ಫಲಕ ತೋರಿದರು. ಶ್ರೀಮತಿ ಪ್ರೇಮ( ಹರಿ ಸಂತು ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿದರು. 
 
ಅಲೆಮಾರಿ ಸಂತು ಎಂದೆ ಖ್ಯಾತರಾಗಿರುವ, ಇತ್ತೀಚೆಗಷ್ಟೇ ‘ಕಾಲೇಜ್ ಕುಮಾರ‘ ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ್ದ ಹರಿ ಸಂತು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ತರುಣ್ ಸುಧೀರ್ ಬರೆದಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.
 
ಈ ಚಿತ್ರಕ್ಕಾಗಿ ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅವರು ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಒಂದು ತಿಂಗಳಿನಿಂದ ಬೃಹತ್ ಮನೆ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ.
ಶರಣ್, ರವಿಶಂಕರ್, ಸಾಧುಕೋಕಿಲ, ತಬಲನಾಣಿ, ಪ್ರಶಾಂತ್ ಸಿದ್ದಿ, ಅರಸು, ಕಲ್ಯಾಣಿ, ಅರುಣ ಬಾಲರಾಜ್, ಸುಂದರ್, ನಾಜರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಆರಂಭ - Chitratara.com
Copyright 2009 chitratara.com Reproduction is forbidden unless authorized. All rights reserved.