Chief Editor
Manohar. R (Manu)
Photo Journalist
chitrataramanu@gmail.com
+91 9845549026
ದ್ವಾರಕೀಶ್ ನಿರ್ಮಾಣದ ಚಿತ್ರಕ್ಕೆ ಆಯುಷ್ಮಾನ್‌ಭವ ಶೀರ್ಷಿಕೆ
Posted date: 21 Sun, Jul 2019 10:59:55 AM

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ.ಎಸ್.ದ್ವಾರಕೀಶ್ ಹಾಗೂ ಯೋಗೀಶ್ ದ್ವಾರಕೀಶ್ ಅವರು ನಿರ್ಮಿಸುತ್ತಿರುವ, ಡಾ||ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಚಿತ್ರಕ್ಕೆ ‘ಆಯುಷ್ಮಾನ್‌ಭವ‘ ಎಂದು ಶೀರ್ಷಿಕೆ ಇಡಲಾಗಿದೆ.

ಪಿ.ವಾಸು ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಗೌರಿಬಿದನೂರು, ಅಲೇಪಿ, ಚಾಲ್‌ಕುಡಿ, ಮಂಗಳೂರು, ಮಡಿಕೇರಿ, ಹೈದರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಪಿ.ಕೆ.ಎಚ್.ದಾಸ್ ಛಾಯಾಗ್ರಹಣ, ಗೌತಮ್‌ರಾಜು ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಎ.ಹರ್ಷ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಶಿವರಾಜಕುಮಾರ್, ಅನಂತನಾಗ್, ರಚಿತಾರಾಂ, ನಿಧಿಸುಬ್ಬಯ್ಯ, ಸುಹಾಸಿನಿ, ಶಿವಾಜಿಪ್ರಭು, ಸಾಧುಕೋಕಿಲ, ರಂಗಾಯಣ ರಘು, ಯಶ್ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ದ್ವಾರಕೀಶ್ ನಿರ್ಮಾಣದ ಚಿತ್ರಕ್ಕೆ ಆಯುಷ್ಮಾನ್‌ಭವ ಶೀರ್ಷಿಕೆ - Chitratara.com
Copyright 2009 chitratara.com Reproduction is forbidden unless authorized. All rights reserved.