Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪಿ ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ ಫ್ಯಾಮಿಲಿ ಪ್ಯಾಕ್
Posted date: 08 Wed, Apr 2020 – 11:40:08 AM

ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಈಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್, ಲಿಖಿತ್ ಶೆಟ್ಟಿ ಹಾಗೂ ದೇಶ್ ರಾಹ್ ರೈ ಈ ಚಿತ್ರದ ನಿರ್ಮಾಪಕರು.

ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ರಂಗಾಯಣ ರಘು, ಅಚ್ಯುತಕುಮಾರ್, ತಿಲಕ್, ಅಶ್ವಿನಿ ಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪಿ ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ ಫ್ಯಾಮಿಲಿ ಪ್ಯಾಕ್ - Chitratara.com
Copyright 2009 chitratara.com Reproduction is forbidden unless authorized. All rights reserved.