Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಹಿಷಾಸುರ ಬಿಡುಗಡೆ ಸಿದ್ದ
Posted date: 07 Mon, Sep 2020 03:37:23 PM

ಮಳೇಕೋಟೆ ಮತ್ತು ಮೈತ್ರಿ ಪ್ರೊಡಕ್ಷನ್ ಸಂಸ್ಥೆ ಲಾಂಛನದಡಿ ತಯಾರಾಗಿರುವ ಮಹಿಷಾಸುರ ಚಿತ್ರ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಕೂಡ ಬಿಡುಗಡೆಯಾಗಿದ್ದು, ಸೆನ್ಸಾರ್ ಮಂಡಳಿ ಯು /ಎ ಪ್ರಮಾಣ ಪತ್ರ ನೀಡಿದೆ. ಇದೊಂದು ತ್ರಿಕೋನ ಪ್ರೇಮಕಥೆ ಯಾಗಿದೆ. ನಿಜ ಜೀವನದಲ್ಲಿ ನಡೆದ ಘಟನೆಗಳನ್ನು

ಆದರಿಸಿ ಮಹಿಷಾಸುರ ಚಿತ್ರವನ್ನು ತೆರೆಗೆ ತರಲು ನಿರ್ದೇಶಕ ಉದಯ ಪ್ರಸನ್ನ ಮುಂದಾಗಿದ್ದಾರೆ.

ಉದಯ ಪ್ರಸನ್ನ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ನಿರ್ದೇಶನ ಮಾಡಿದ್ದಾರೆ. ಲೀಲಾವತಿ ಸುರೇಶ್ ಕುಮಾರ್, ಪ್ರೇಮಾ ಚಂದ್ರಯ್ಯ, ನಾಗಸಂದ್ರ, ಮೈತ್ರಿ ಮಂಜುನಾಥ್ ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸುನಿಲ್ ಕೌಶಿಕ್, ಸಾಯಿಕಿರಣ್ ಸಂಗೀತ, ಕೃ? ಛಾಯಾಗ್ರಹಣ, ರಾಘವೇಂದ್ರ ವಿ. ಹಿನ್ನೆಲೆ ಸಂಗೀತ, ವೆಂಕಿ ಡಿವಿಡಿ ಸಂಕಲನ, ರಾಕಿ ರಮೇಶ್ ಸಾಹಸ, ಸುಜಿತ್ ಕಿಶೋರ್ ನೃತ್ಯ ನಿರ್ದೇಶನ, ವಿರಾಟ್ ರಾಜು ಸಂಭಾ?ಣೆ ಚಿತ್ರಕ್ಕಿದೆ. ಚಿತ್ರದಲ್ಲಿ ಅರ್ಜುನ್, ಬಿಂದುಶ್ರೀ, ಮಂಜು, ರಘು ಪಾಂಡೇಶ್ವರ, ರಾಕ್ ಲೈನ್ ಸುಧಾಕರ್, ಮಾಸ್ಟರ್ ತುಷಾರ್, ಮಾಸ್ಟರ್ ಸುಜಿತ್, ರವಿಚಂದ್ರ ಮುಂತಾದವರ ತಾರಾಬಳಗವಿದೆ

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಹಿಷಾಸುರ ಬಿಡುಗಡೆ ಸಿದ್ದ - Chitratara.com
Copyright 2009 chitratara.com Reproduction is forbidden unless authorized. All rights reserved.