Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಾತಿನಮನೆಯಲ್ಲಿ ‘ನೋಟಗಾರ’
Posted date: 14 Tue, May 2019 – 08:21:52 AM

ಬೆಳ್ಳುಡಿ ಸಿನಿಮಾಸ್ ಲಾಂಛಾನದಲ್ಲಿ ಪರಮೇಶಿ ಎ.ಹೆಚ್ ಹಾಗೂ ಹರ್ಷ ಬೆಳ್ಳುಡಿ ಅವರು ನಿರ್ಮಿಸುತ್ತಿರುವ ‘ನೋಟಗಾರ‘ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು ಮತ್ತು ತೀರ್ಥಹಳ್ಳಿಯಲ್ಲಿ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಹಾಡುಗಳ ಚಿತ್ರೀಕರಣ ಬಾಕಿಯಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಲಿದೆ.

ಮಂಜು ಹೆದ್ದೂರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕನಾಗಿ ಸಿದ್ದು ಮೂಲಿಮನಿ ನಟಿಸುತ್ತಿದ್ದಾರೆ. ಕನ್ನಡ, ತಮಿಳು, ಮಲೆಯಾಳಂ ಚಿತ್ರಗಳಲ್ಲಿ ನಟಿಸಿರುವ ಅಶ್ವಿನಿ ಚಂದ್ರಶೇಖರ್ ಈ ಚಿತ್ರದ ನಾಯಿಕಿ. ಮೋಹನ್ ಜುನೇಜ, ಪ್ರಕಾಶ್ ತುಮಿನಾಡು, ನಾಗೇಶ್ ಮಯ್ಯ, ಪೃಥ್ವಿರಾಜ್, ವಿನಯ್ ಕಣಿವೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ದೆಶಕ ಮಂಜು ಹೆದ್ದೂರ್ ಕೂಡ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ.   

ಡಾ||ವಿ.ನಾಗೇಂದ್ರಪ್ರಸಾದ್ ಹಾಗೂ ಭರ್ಜರಿ ಚೇತನ್ ಕುಮಾರ್ ಅವರು ಬರೆದಿರುವ ಈ ಚಿತ್ರದ ಹಾಡುಗಳಿಗೆ ಅರ್ಜುನ್ ರಾಮು ಸಂಗೀತ ನೀಡಿದ್ದಾರೆ. ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ವಿನಯ್ ಕುಮಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ವಾಗೀಶ್ ಹೆಚ್.ಪಿ.

 

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಾತಿನಮನೆಯಲ್ಲಿ ‘ನೋಟಗಾರ’ - Chitratara.com
Copyright 2009 chitratara.com Reproduction is forbidden unless authorized. All rights reserved.