Chief Editor
Manohar. R (Manu)
Photo Journalist
chitrataramanu@gmail.com
+91 9845549026
ರತ್ನ ಮಂಜರಿ ನಾಳೆಯಿಂದ ತೆರೆಗೆ
Posted date: 16 Thu, May 2019 01:31:25 PM

ಇದು ಎನ್ ಆರ್ ಐ ಕನ್ನಡಿಗರ ಪ್ರಾಮಾಣಿಕ ಪ್ರಯತ್ನ ‘ರತ್ನ ಮಂಜರಿ’. ಶರಾವತಿ ಫಿಲ್ಮ್ಸ್ ಅಡಿಯಲ್ಲಿ ಸಂದೀಪ್ ಕುಮಾರ್, ಡಾ ನವೀನ್ ಕೃಷ್ಣ ಹಾಗೂ ನಟರಾಜ ಹಳೇಬೀಡು ನಿರ್ಮಾಣದ ಸಿನಿಮಾಕ್ಕೆ ಅಮೆರಿಕದಲ್ಲಿ ನಡೆದ ಘಟನೆಗೆ ಕರ್ನಾಟಕದ ಕನೆಕ್ಷನ್ ಬೆಸೆಯಲಾಗಿದೆ. ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಅಮೆರಿಕದಲ್ಲಿ ದಶಕಗಳ ಹಿಂದೆ ನಡೆದೊಂದು ಕಥೆಯ ಬೇಸಿನಲ್ಲಿ ರತ್ನಮಂಜರಿ ಚಿತ್ರದ ಕಥೆ ರೂಪುಗೊಂಡಿದೆ. ಅದು ಸಂದೀಪ್ ಸೇರಿದಂತೆ ನಿರ್ಮಾಪಕರೆಲ್ಲರ ಇಷಾರೆಯೊಂದಿಗೇ ರೆಡಿಯಾಗಿರೋ ಕಥೆ. ನಂತರ ಈ ಚಿತ್ರದ ಐವತ್ತರಷ್ಟು ಭಾಗದ ಕಥೆಯನ್ನು ಯುಎಸ್ ನಲ್ಲಿ ಮತ್ತುಳಿದ ಅರ್ಧ ಭಾಗವನ್ನು ಮಡಿಕೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆಯೇ ಇಡೀ ಚಿತ್ರೀಕರಣವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಲಾಗಿದೆ. ಪ್ರತಿಯೊಂದು ವಿಚಾರದಲ್ಲಿಯೂ ಕೂಡಾ ಹೊಸತನವೇ ತುಂಬಿಕೊಳ್ಳಬೇಕೆಂಬುದು ಸಂದೀಪ್ ಅವರ ಇರಾದೆಯಾಗಿತ್ತು. ತಮ್ಮಂತೆಯೇ ಕಲೆಯ ಗುಂಗು ಹೊಂದಿದ್ದ ಹೊರನಾಡ ಕನ್ನಡಿಗರಿಗೂ ಅವಕಾಶ ಮಾಡಿಕೊಡಬೇಕೆಂಬ ಆಲೋಚನೆಯೂ ಅವರಲ್ಲಿತ್ತು. ಆದ್ದರಿಂದಲೇ ಈ ಚಿತ್ರದ ಪಾತ್ರಕ್ಕಾಗಿ ವಿದೇಶದಲ್ಲಿ ಆಡಿಷನ್ ಕರೆದಾಗ ಸಾವಿರಕ್ಕೂ ಹೆಚ್ಚು ಆಸಕ್ತರು ಮುಂದೆ ಬಂದಿದ್ದರು. ಕಡೆಗೂ ಅವರಲ್ಲಿ ಹತ್ತು ಮಂದಿಯನ್ನು ಆಯ್ಕೆ ಮಾಡಿ ನಟಿಸಲು ಅವಕಾಶ ಮಾಡಿ ಕೊಡಲಾಗಿದೆ. ಅವರೆಲ್ಲರೂ ವಿದೇಶದಲ್ಲಿಯೇ ರಂಗಭೂಮಿಯ ಸಖ್ಯ ಹೊಂದಿದ್ದವರು. ನಿರ್ದೇಶಕ ಪ್ರಸಿದ್ದ್ ಡೆನ್ಮಾರ್ಕ್ ನಿವಾಸಿ ಈ ಚಿತ್ರವನ್ನೂ ಅನೇಕ ಬಾರಿ ಅವಲೋಕನ ಮಾಡಿ ತೆರೆಗೆ ತಂದಿದ್ದಾರೆ. ರಾಜ್ ಚರಣ್, ಅಕಿಲ ಪ್ರಕಾಶ್, ಪಲ್ಲವಿ ರಾಜು, ಕನ್ನಿಕಾ ಹಾಗೂ ಶ್ರದ್ದ ಸಾಲಿಯನ್ ಪೈಕಿ ಯಾರು ರತ್ನ ಮಂಜರಿ ಎಂಬುದು ಕುತೂಹಲದ ವಿಚಾರ.

ಅಮೆರಿಕದಲ್ಲಿ ಹಾಗೂ ಕರ್ನಾಟಕದ ಮನೋಹರವಾದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಪ್ರೀತಂ ಮತ್ತು ಕಿಟ್ಟಿ ಛಾಯಾಗ್ರಹಣ, ಹರ್ಷವರ್ಧನ ರಾಜ್ ಸಂಗೀತ ಸಂಯೋಜನೆ, ಪವನ್ ರಾಮ್ ಶೆಟ್ಟಿ ಸಂಕಲನ, ವಿಕ್ರಮ್ ಮೋರ್ ಸಾಹಸ ಈ ಸಿನಿಮಾಕ್ಕೆ ಒದಗಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ರತ್ನ ಮಂಜರಿ ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.