ಸಂಜನಾ ಸಿನಿ ಆರ್ಟ್ಸ್ ಲಾಂಛನದಲ್ಲಿ ಎಸ್.ಹೆಚ್.ವಾಳ್ಕೆ ಅವರು ನಿರ್ಮಿಸುತ್ತಿರುವ ‘ಲೋಕಲ್ ಟ್ರೈನ್‘ ಚಿತ್ರದ ಹಾಡುಗಳು ಜನವರಿ 6 ರಂದು ಬಿಡುಗಡೆಯಾಗಲಿದೆ. 5 ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ 70 ದಿನಗಳ ಚಿತ್ರೀಕರಣ ನಡೆದಿದೆ.
ನಿರ್ಮಾಪಕ ಎಸ್.ಹೆಚ್.ವಾಳ್ಕೆ ಅವರು ಕಥೆ ಬರೆದಿದ್ದು, ರುದ್ರಮುನಿ ನಿರ್ದೇಶನ ಮಾಡಿದ್ದಾರೆ. ರಮೇಶ್ ಬಾಬು ಛಾಯಾಗ್ರಹಣ, ಪಿ.ಆರ್.ಸೌಂದರ್‌ರಾಜ್ ಸಂಕಲನ, ರಾಜುಸುಂದರಂ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಹಾಗೂ ಪಳನಿರಾಜ್, ಚೆನ್ನೈ ರಮೇಶ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಕೇಶವಾದಿತ್ಯ, ಮಾರುತಿ.ಟಿ ಸಂಭಾಷಣೆ ಬರೆದಿದ್ದಾರೆ.
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಮೀನಾಕ್ಷಿ ದೀಕ್ಷಿತ್, ಎಸ್ಟರ್ ನರೋನ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ಚಿ.ಗುರುದತ್, ಮೈಸೂರು ಗೋಪಿ ಮುಂತಾದವರಿದ್ದಾರೆ.