Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಸಾವಿತ್ರಿ` ಯಾಗಿ ತಾರಾ
Posted date: 03 Tue, Nov 2020 04:16:24 PM

ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳಿಂದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ ಜನಮನಸೂರೆಗೊಂಡಿರುವ ನಟಿ ತಾರಾ.
ಈಗ ಅವರು ' ಸಾವಿತ್ರಿ ' ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ನವೆಂಬರ್‌ 19 ರಿಂದ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ.
ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ (ಹೀಲಲ್ಲಿಗೆ) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ.
 ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. 'ಉಯ್ಯಾಲೆ' ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.
ಖ್ಯಾತ ಸಾಹಿತಿ ಹೃದಯ ಶಿವ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
 ತಾರಾ, ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,‌ಬೇಬಿ ಲೈಲಾ, ಪ್ರಮೋದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೊಬೈಲ್ ಮುಂತಾದ ಆಧುನಿಕ ತಂತ್ರಜ್ಞಾನಗಳಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು? ಎನ್ನುವುದು ಚಿತ್ರದ  ಕಥಾಹಂದರ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಸಾವಿತ್ರಿ` ಯಾಗಿ ತಾರಾ - Chitratara.com
Copyright 2009 chitratara.com Reproduction is forbidden unless authorized. All rights reserved.