Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ)
Posted date: 03 Tue, Nov 2020 04:52:00 PM

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ  ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು ೧೯೮೧ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ.  ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು. ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು. ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ರಾಯರು ತಮ್ಮ 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ) - Chitratara.com
Copyright 2009 chitratara.com Reproduction is forbidden unless authorized. All rights reserved.