Chief Editor
Manohar. R (Manu)
Photo Journalist
chitrataramanu@gmail.com
+91 9845549026
ಭಾರಿ ಸದ್ದು ಮಾಡುತ್ತಿದೆ ಪ್ರಾರಂಭ ಚಿತ್ರದ ಟ್ರೇಲರ್
Posted date: 13 Sun, Dec 2020 01:47:34 PM

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ `ಪ್ರಾರಂಭ` ಚಿತ್ರದ ಟ್ರೇಲರ್ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು,  ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ನಾಯಕ ಮನೋರಂಜನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರಾರಂಭ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ‌ ಟ್ರೇಲರ್ ಗೆ ಪ್ರದ್ಯೋತನ್ ಅವರ ಸಂಗೀತ ಹೆಚ್ಚಿನ ಮೆರಗು ನೀಡಿದೆ.   ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರೀಕರಣ   ನಡೆದಿದೆ.

ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ `ಪ್ರಾರಂಭ` ರಾರಾಜಿಸಲಿದೆ  ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿದ್ದಾರೆ.

`ಪ್ರಾರಂಭ` ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.   

5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಭಾರಿ ಸದ್ದು ಮಾಡುತ್ತಿದೆ ಪ್ರಾರಂಭ ಚಿತ್ರದ ಟ್ರೇಲರ್ - Chitratara.com
Copyright 2009 chitratara.com Reproduction is forbidden unless authorized. All rights reserved.