Chief Editor
Manohar. R (Manu)
Photo Journalist
chitrataramanu@gmail.com
+91 9845549026
ಚಿರಂಜೀವಿ ಸರ್ಜಾ ಅಭಿನಯದ ``ರಣಂ`` ಚಿತ್ರ ಮಾರ್ಚ್‌ 26 ಕ್ಕೆ ಬಿಡುಗಡೆ
Posted date: 13 Sat, Mar 2021 12:43:39 PM

ಕಳೆದವರ್ಷ ನಿಧನರಾದ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ``ರಣಂ`` ಚಿತ್ರ ಮಾರ್ಚ್ 26 ರಂದು ಬಿಡುಗಡೆಯಾಗುತ್ತಿದೆ.
ಸುಮಾರು 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ``ರಣಂ``ತೆರೆ ಕಾಣಲಿದೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್  ಹಿಟ್ ಚಿತ್ರಗಳನ್ನು ನೀಡಿರುವ ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್  ಶ್ರೀನಿವಾಸ್(ಕನಕಪುರ)  ಅವರು ನಿರ್ಮಾಣ ಮಾಡಿರುವ 21ನೇ ಚಿತ್ರವಿದು. ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.
ಚಿರಂಜೀವಿ ಸರ್ಜಾ‌ ಅವರು ನಟಿಸಿ, ಡಬ್ಬಿಂಗ್ ಸಹ ಪೂರ್ಣ ಮಾಡಿರುವ ಚಿತ್ರ ``ರಣಂ``. ಇದು ಅವರೆ ಡಬ್ಬಿಂಗ್ ಮಾಡಿರುವ ಕೊನೆಯ ಚಿತ್ರ.
ವಿ.ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್ ಚಿನ್ನ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್ ಹಾಗೂ ಎ.ಪಿ.ಅರ್ಜುನ್ ರಚಿಸಿದ್ದಾರೆ. ಸಂಭಾಷಣೆಯನ್ನು ಪಾರ್ವತಿ ಚಂದು ಮತ್ತು ಮೋಹನ್ ಬರೆದಿದ್ದಾರೆ.
ಚಿರಂಜೀವಿ ಸರ್ಜಾ, ಚೇತನ್(ಆ ದಿನಗಳು), ವರಲಕ್ಷ್ಮೀ ಶರತ್ ಕುಮಾರ್, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್, ಬೆಸೆಂಟ್ ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚಿರಂಜೀವಿ ಸರ್ಜಾ ಅಭಿನಯದ ``ರಣಂ`` ಚಿತ್ರ ಮಾರ್ಚ್‌ 26 ಕ್ಕೆ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.