Chief Editor
Manohar. R (Manu)
Photo Journalist
chitrataramanu@gmail.com
+91 9845549026
Cult critic movie award ನಲ್ಲಿ ``ದಾರಿ ಯಾವುದಯ್ಯ ವೈಕುಂಠಕೆ`` ಚಿತ್ರಕ್ಕೆ ಮೂರು ಪ್ರಶಸ್ತಿಯ ಗರಿ
Posted date: 13 Sat, Mar 2021 01:03:11 PM

ಕೊಲ್ಕತ್ತಾದಲ್ಲಿ ನಡೆಯುವ  Cult critic movie award ನಲ್ಲಿ ಶರಣಪ್ಪ ಎಂ ಕೊಟಗಿ ನಿರ್ಮಿಸಿರುವ ``ದಾರಿ ಯಾವುದಯ್ಯ ವೈಕುಂಠಕೆ`` ಚಿತ್ರಕ್ಕೆ ಮೂರು ಪ್ರಶಸ್ತಿ ಲಭಿಸಿದೆ.
ನಿರ್ದೇಶಕ ಸಿದ್ದು ಪೂರ್ಣಚಂದ್ರ ಅವರಿಗೆ ಉತ್ತಮ‌ ನಿರ್ದೇಶಕ ಪ್ರಶಸ್ತಿ,
ಬಲ ರಾಜವಾಡಿ ಅವರಿಗೆ ಉತ್ತಮ ಪೋಷಕ ನಟ ಪ್ರಶಸ್ತಿ ಹಾಗೂ ಚಿತ್ರಕ್ಕೆ ಬೆಸ್ಟ್ ಔಟ್ ಸ್ಟಾಂಡಿಂಗ್ ಅಚೀವ್ ಮೆಂಟ್ ಅವಾರ್ಡ್ ಬಂದಿದೆ.‌
ಇನೇನು ಬಿಡುಗಡೆಯ ಹೊಸ್ತಿಲಲ್ಲಿರುವ ಈ ಚಿತ್ರಕ್ಕೆ ಮೂರು ವಿಭಾಗಗಳಲ್ಲಿ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರತಂಡ ಸಂತಸಪಟ್ಟಿದೆ. ಇನ್ನೂ ಹಲವು ಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ.
ಸಿದ್ದು ಪೂರ್ಣಚಂದ್ರ ನಿರ್ದೇಶನದ ಈ ಚಿತ್ರದ ನಾಯಕನಾಗಿ ವರ್ಧನ್ ಅಭಿನಯಿಸಿದ್ದಾರೆ. ಪೂಜ(ತಿಥಿ ಚಿತ್ರ), ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅನುಷಾ, ಸ್ಪಂದನ ಪ್ರಸಾದ್, ಅರುಣ್ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - Cult critic movie award ನಲ್ಲಿ ``ದಾರಿ ಯಾವುದಯ್ಯ ವೈಕುಂಠಕೆ`` ಚಿತ್ರಕ್ಕೆ ಮೂರು ಪ್ರಶಸ್ತಿಯ ಗರಿ - Chitratara.com
Copyright 2009 chitratara.com Reproduction is forbidden unless authorized. All rights reserved.