Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಾರ್ಚ್ 27ಕ್ಕೆ ಸಸ್ಪೆನ್ಸ್ ಥ್ರಿಲ್ಲರ್ ``ಮೋಕ್ಷ`` ಚಿತ್ರದ ಟ್ರೇಲರ್ ಬಿಡುಗಡೆ
Posted date: 13 Sat, Mar 2021 01:08:57 PM

ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿದೆ. ಆದರೆ ಎಲ್ಲಾ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ಕಥೆ ಒಳಗೊಂಡಿದೆ.
ಆದರೆ ಕನ್ನಡದಲ್ಲಿ ತೀರ ವಿಭಿನ್ನ ಎನ್ನಬಹುದಾದ ಚಿತ್ರವೊಂದು ತೆರೆಗೆ ಬರಲು ಸಿದ್ದವಿದೆ. ಅದೇ ``ಮೋಕ್ಷ``.
ಚಿತ್ರ ಬಿಡುಗಡೆಗೂ ಮೊದಲು ಇದೇ 27ರಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ.
ಸಾಕಷ್ಟು ಜಾಹೀರಾತುಗಳನ್ನು ನಿರ್ಮಿಸಿ ಅನುಭವವಿರುವ ಸಮರ್ಥ್ ನಾಯಕ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಹಿರಿತೆರೆಯಲ್ಲಿ ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರದ ನಿರ್ಮಾಪಕರೂ ಸಮರ್ಥ್ ನಾಯಕ್ ಅವರೆ.
ನೋಡುಗರನ್ನು ಕ್ಷಣಕ್ಷಣಕ್ಕೂ ಗೊಂದಲಗೊಳಿಸುವ, ರೋಚಕ, ಭಯಾನಕ, ನಿಗೂಢ ಕಥೆಯುಳ್ಳ ಸ್ಸಸ್ಪೆನ್ಸ್ ಸಿನಿಮಾ ``ಮೋಕ್ಷ`` ಎನ್ನುತ್ತಾರೆ ನಿರ್ದೇಶಕರು.
ಈ ಚಿತ್ರದ ಎಲ್ಲಾ ಪಾತ್ರಗಳಲ್ಲೂ ವಿಶೇಷತೆ ಇದೆ. ವಿಶೇಷವಾಗಿ ಮಾಸ್ಕ್ ಮ್ಯಾನ್ ಎಂಬ  ಪಾತ್ರ ಎಲ್ಲರ ಗಮನ ಸೆಳೆಯಲಿದೆ.
ಜಯಂತ್ ಕಾಯ್ಕಿಣಿ, ಕುಮಾರ್ ದತ್ ಅವರು ಬರೆದಿರುವ ಎರಡು ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಕಿಶನ್ ಮೋಹನ್ ಅವರದು.
ಗುರುಪ್ರಶಾಂತ್ ರೈ, ಜೋಮ್ ಜೋಸಫ್, ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ವರುಣ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ.
ಮೋಹನ್ ಧನರಾಜ್ ಮತ್ತು ಆರಾಧ್ಯ ಲಕ್ಷ್ಮಣ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ಮುಂತಾದ ವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಾರ್ಚ್ 27ಕ್ಕೆ ಸಸ್ಪೆನ್ಸ್ ಥ್ರಿಲ್ಲರ್ ``ಮೋಕ್ಷ`` ಚಿತ್ರದ ಟ್ರೇಲರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.