Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಾರ್ಚ್ 19 ರಂದು ಬರಲಿದೆ ಕಸ್ತೂರಿ ಮಹಲ್ ನ ಲಿರಿಕಲ್ ಹಾಡು.
Posted date: 14 Sun, Mar 2021 03:31:16 PM

ಖ್ಯಾತ ನಿರ್ದೇಶಕ  ದಿನೇಶ್ ಬಾಬು ನಿರ್ದೇಶನದ  50ನೇ ಚಿತ್ರ ಕಸ್ತೂರಿ ಮಹಲ್  .
ಈ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದಾವಾಗಲಿದೆ.
ಮೇ ಅಂತ್ಯ ಹಾಗೂ ಜೂನ್  ಮೊದಲವಾರದಲ್ಲಿ ಕಸ್ತೂರಿ ಮಹಲ್
ಮೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದೇ 19ರಂದು A2 ಮ್ಯೂಸಿಕ್ ಮೂಲಕ ಈ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.
ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ನಾನ್ಯರು ನನಗೆ ಯಾರು" ಎಂಬ ಈ  ಹಾಡನ್ನು ಅನುರಾಧಾ ಭಟ್ ಹಾಡಿದ್ದಾರೆ.

ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದ ಈ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು  ಮಾಡುತ್ತಿದೆ.

ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ  ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ  ನಿರ್ಮಿಸಿರುವ ಈ ಚಿತ್ರಕ್ಕೆ  ನವೀನ್ ಆರ್ ಸಿ ಹಾಗೂ
 ಅಕ್ಷಯ್ ಸಿ.ಎಸ್ ಅವರ ಸಹ  ನಿರ್ಮಾಣವಿದೆ .ಪಿ.ಕೆ.ಹೆಚ್ ದಾಸ್* ಛಾಯಾಗ್ರಹಣ ಹಾಗೂ *ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್ ಗಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಾರ್ಚ್ 19 ರಂದು ಬರಲಿದೆ ಕಸ್ತೂರಿ ಮಹಲ್ ನ ಲಿರಿಕಲ್ ಹಾಡು. - Chitratara.com
Copyright 2009 chitratara.com Reproduction is forbidden unless authorized. All rights reserved.