Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮೊದಲ ಹಂತದ ಚಿತ್ರೀಕರಣ ಮುಗಿಸಿದ ``ಸರ್ವಂ``
Posted date: 18 Thu, Mar 2021 02:14:49 PM

ಕೃಷ್ಣ ಕಂಬೈನ್ಸ್ ಹಾಗೂ ಉದಯ ಆರ್ಟ್ಸ್ ಲಾಂಛನದಲ್ಲಿ ಸುರೇಶ್ ಕಣ್ಣ ಹಾಗೂ ಕೆ.ಎಂ.ಕೃಷ್ಣ ದೊಡ್ಡಿ ನಿರ್ಮಿಸುತ್ತಿರುವ `` ಸರ್ವಂ `` ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು, ಒಂದು ಸಾಹಸ ‌ಸನ್ನಿವೇಶ ಹಾಗೂ ಮಾತಿನ‌ ಭಾಗದ ಚಿತ್ರೀಕರಣ ಮೊದಲ ಹಂತದಲ್ಲಿ ನೆಡದಿದೆ.‌ ಅಫ್ಜಲ್ (ನಮ್ಮ ಸೂಪರ್ ಸ್ಟಾರ್) ಈ ಚಿತ್ರದ ಸಹ ನಿರ್ಮಾಪಕರು.
ಚಿತ್ರೀಕರಣಕ್ಕಾಗಿ‌ ಬೆಂಗಳೂರಿನ‌ ಜಿಗಣಿ ಬಳಿ ಅದ್ದೂರಿ ಸೆಟ್ ಹಾಕಲಾಗಿತ್ತು.‌
ಎರಡನೇ ಹಂತದ ಚಿತ್ರೀಕರಣ ಪಾಂಡಿಚೇರಿ, ಮಂಗಳೂರು, ಗೋವಾದಲ್ಲಿ ‌ನಡೆಯಲಿದ್ದು, ಮುಂದಿನವಾರದಿಂದ ಚಿತ್ರೀಕರಣ ಆರಂಭವಾಗಲಿದೆ.‌ ಒಟ್ಟು ನಾಲ್ಕು ಹಂತದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ.
ಕಲಾವಿದನಾಗಿ ಅನಕ್ಷ, ಮೊಂಬತ್ತಿ, ತಮಸ್ ಹಾಗೂ ಛಾಯ ಚಿತ್ರಗಳಲ್ಲಿ ಅಭಿನಯಿಸಿರುವ ರಾಜ್ ಪ್ರಭು‌ ಈ ಚಿತ್ರದ ನಾಯಕನಾಗಿ ಅಭಿನಯಿಸಿರುವುದಲ್ಲದೆ, ನಿರ್ದೇಶಕನಾಗೂ ಕಾರ್ಯ ನಿರ್ವಹಿಸಿದ್ದಾರೆ.‌‌‌ ಸಾಕಷ್ಟು ಜಾಹೀರಾತುಗಳನ್ನು ನಿರ್ದೇಶಿಸಿರುವ ರಾಜ್ ಪ್ರಭು ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ.
ನಿರ್ದೇಶಕರೆ ``ಸರ್ವಂ`` ಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ರಾಜರತ್ನ ಬರೆಯುವುದರ ಜೊತೆಗೆ ಸಹ ನಿರ್ದೇಶನವನ್ನು ಮಾಡಿದ್ದಾರೆ. ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಕೌಶಿಕ್ ಹರ್ಷ ಸಂಗೀತ ನೀಡುತ್ತಿದ್ದಾರೆ. ಶ್ಯಾಂ ಸಿಂಧನೂರು ಛಾಯಾಗ್ರಹಣ, ಕೆ.ಬಿ.ಕೆ ಫಯಾಜ್ ಖಾನ್ ಸಾಹಸ ನಿರ್ದೇಶನ ಹಾಗೂ ಜಗ್ಗು  ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ರಾಜ್ ಪ್ರಭು ಅವರಿಗೆ ನಾಯಕಿಯಾಗಿ‌ ಅಕ್ಷಿತ ನಾಗರಾಜ್ ನಟಿಸಿದ್ದಾರೆ. ಧಾರಾ ಪರೇಕ್, ಅಫ್ಜಲ್, ರವಿ, ಕನ್ನಡ ರಾಜು, ಸ್ಮೈಲ್ ಶಿವು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮೊದಲ ಹಂತದ ಚಿತ್ರೀಕರಣ ಮುಗಿಸಿದ ``ಸರ್ವಂ`` - Chitratara.com
Copyright 2009 chitratara.com Reproduction is forbidden unless authorized. All rights reserved.