Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮೈಸೂರಿನಲ್ಲಿ ಚಿತ್ರನಗರಿ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಸಂತಸ
Posted date: 19 Fri, Mar 2021 � 11:06:19 AM

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರ. ಕಳೆದ 40 ವರ್ಷದಿಂದ ಹೆಸರಘಟ್ಟ, ರಾಮನಗರ ಅಲ್ಲಿ, ಇಲ್ಲಿ ಚಿತ್ರನಗರಿ ತಲೆಯತ್ತಲಿದೆ ಎಂಬ ಸುದ್ದಿಗಳನ್ನೇ ಕೇಳುತ್ತ ಬಂದಿದ್ದೇವು. ಇದೀಗ ಮೈಸೂರು ಸೂಚಿಸಿದ್ದಕ್ಕೆ ಖುಷಿಯಾಗಿದೆ. ಇದರ ಅನುಷ್ಠಾನಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು, ವಿಜಯೇಂದ್ರ, ಶಿವರಾತ್ರಿ ಸ್ವಾಮೀಜಿ ಅವರಿಗೆ ನನ್ನ ಕಡೆಯಿಂದ ಧನ್ಯವಾದ. ಅದೇ ರೀತಿ ಸಚಿವರಾದ ಎಸ್.ಟಿ ಸೋಮಶೇಖರ್, ಸಿ.ಸಿ ಪಾಟೀಲ್, ಸಿ.ಪಿ.ಯೋಗಿಶ್ವರ್  ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ನನ್ನ ಧನ್ಯವಾದ. ಮೈಸೂರಿಗೆ 85 ವರ್ಷಗಳ ಸಿನಿಮಾ ಇತಿಹಾಸವಿದೆ. ಇಂಥಹ ಇತಿಹಾಸ ಇರುವ ನಗರಕ್ಕೆ ಚಿತ್ರನಗರಿ ಅನ್ನೋ ಮತ್ತೊಂದು ಕಿರೀಟ ಮುಡಿಗೇರಿದ್ದು, ಚಿತ್ರೋದ್ಯಮದ ಪ್ರಗತಿಗೆ ದಾರಿಯಾಗಿದೆ. ಮೈಸೂರು ಪ್ರವಾಸೋದ್ಯಮಕ್ಕೂ ಇದರಿಂದ ಪುಷ್ ಸಿಕ್ಕಂತಾಗಿದೆ. ಎಂಜಿಆರ್, ರಾಜ್ ಕಪೂರ್. ಶಾಂತಾ ರಾಮ್ ಎಲ್ಲರೂ ಮೈಸೂರಿನಲ್ಲಿಯೇ ಬಿಡಾರ ಹೂಡುತ್ತಿದ್ದರು. ಕೇವಲ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 257 ಲೋಕೇಷನ್‌ಗಳು ಮೈಸೂರಿನಲ್ಲಿವೆ. 16 ಪ್ಯಾಲೇಸ್‌ಗಳಿವೆ. 5 ನದಿಗಳಿವೆ. ಹೀಗಾಗಿಯೇ ವಿಷ್ಣುವರ್ಧನ್ ಮತ್ತು ರಜನಿಕಾಂತ್ ಅವರಿಗೂ ಮೈಸೂರು ಅಂದ್ರೆ ಪಂಚಪ್ರಾಣ. ಇದೀಗ ಸರ್ಕಾರ ಇಷ್ಟೇಲ್ಲ ಐತಿಹ್ಯ ಇರುವ ನಗರಕ್ಕೆ ಚಿತ್ರನಗರಿ ನೀಡುತ್ತಿದೆ. ಸರ್ಕಾರಕ್ಕೆ, ಚಿತ್ರನಗರಿ ಸ್ಥಾಪನೆಗೆ ಕಾರಣೀಕರ್ತರಾದ ಎಲ್ಲರಿಗೂ ನನ್ನ ಧನ್ಯವಾದಗಳು.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮೈಸೂರಿನಲ್ಲಿ ಚಿತ್ರನಗರಿ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಸಂತಸ - Chitratara.com
Copyright 2009 chitratara.com Reproduction is forbidden unless authorized. All rights reserved.