Chief Editor
Manohar. R (Manu)
Photo Journalist
chitrataramanu@gmail.com
+91 9845549026
ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್
Posted date: 01 Wed, Sep 2021 12:48:33 PM
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ , ದೀಪಕ್ ಅರಸ್ ನಿರ್ದೇಶನದ ``ಶುಗರ್ ಫ್ಯಾಕ್ಟರಿ``ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ.

ಸೆಪ್ಟೆಂಬರ್ 10 ಗಣೇಶ ಚತುರ್ಥಿ ಯ ಸಂಭ್ರಮ. ಆ ಶುಭದಿನದಂದು``ಶುಗರ್ ಫ್ಯಾಕ್ಟರಿ`` ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸಾಂಗ್ ಟೀಸರ್‌ ಬರಲಿದೆ.

 ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ. 
 ಡಾರ್ಲಿಂಗ್ ಕೃಷ್ಣ ಅವರೊಡನೆ ಈ‌ ಹಾಡಿಗೆ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ. ಧನಂಜಯ್ ನೃತ್ಯ ನಿರ್ದೇಶನ ಮಾಡಿದ್ದಾರೆ.

ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಈ ಹಾಡನ್ನು ಸುಂದರವಾಗಿ ಸೆರೆಹಿಡಿದಿದ್ದಾರೆ ಛಾಯಾಗ್ರಹಕ ಸಂತೋಷ್ ರೈ ಪಾತಾಜೆ. 

ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಪ್ರೇಕ್ಷಕರ ಮನಸ್ಸಿಗೆ ಲಗ್ಗೆ ಹಾಕುವುದು ಖಚಿತ ಎನ್ನುತ್ತಾರೆ ನಿರ್ದೇಶಕರು.

 ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ . ಆರ್  ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ 

 ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ - Chitratara.com
Copyright 2009 chitratara.com Reproduction is forbidden unless authorized. All rights reserved.