Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ ``ನಟ ಭಯಂಕರ`` ಚಿತ್ರದ ಡ್ರಿಲ್ಲಿಂಗ್ ಟ್ರೇಲರ್..
Posted date: 28 Tue, Dec 2021 03:36:47 PM
ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ``ನಟ ಭಯಂಕರ`` ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾರಾರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ ಪ್ರಥಮ್ ಅವರ ಅಭಿಮಾನಿ‌ಗಳಿಗಿದೆ.

ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಜನವರಿ ಕೊನೆ ಅಥವಾ ಫೆಬ್ರವರಿ ಮೊದಲವಾರದಲ್ಲಿ ತೆರೆಗೆ ಬರಲಿದೆ. ಹೆಚ್ ಪಿ ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

ಉದಯ್ ಕೆ ಮೆಹ್ತಾ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಪ್ರಥಮ್ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡನ್ನು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.
ಡಾ||ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಗೂ ಅರಸು ಅಂತಾರೆ ಹಾಡುಗಳನ್ನು ರಚಿಸಿದ್ದಾರೆ. 

ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಈಗ ಡಿಐ ನಡೆಯುತ್ತಿದೆ.‌

ಪ್ರಥಮ್ ಅವರೊಂದಿಗೆ ಹಿರಿಯ ನಟ ಸಾಯಿಕುಮಾರ್ ಸಹ ನಟಿಸಿದ್ದಾರೆ. ಡಕೋಟ ಎಕ್ಸ್‌ಪ್ರೆಸ್ ನ ನಂತರ ಓಂಪ್ರಕಾಶ್ ರಾವ್ ನಟಿಸಿರುವ ಕಾಮಿಡಿ  ಚಿತ್ರವಿದು. ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ ``ನಟ ಭಯಂಕರ`` ಚಿತ್ರದ ಡ್ರಿಲ್ಲಿಂಗ್ ಟ್ರೇಲರ್.. - Chitratara.com
Copyright 2009 chitratara.com Reproduction is forbidden unless authorized. All rights reserved.