ಸೋನು ಫಿಲಂಸ್ ಲಾಂಛನದಲ್ಲಿ ಕೆ.ಮಂಜುನಾಥ್ ನಾಯಕ್ ನಿರ್ಮಿಸುತ್ತಿರುವ, ಯತಿರಾಜ್ ನಿರ್ದೇಶಿಸುತ್ತಿರುವ ``ಸೀತಮ್ಮನ ಮಗ``ಚಿತ್ರಕ್ಕೆ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಕಳೆದ ಹದಿನೈದು ದಿನಗಳಿಂದ ಅಲ್ಲಿನ ಮನೆ, ಶಾಲೆ ಹಾಗೂ ಸುಂದರ ಪರಿಸರದಲ್ಲಿ ಅನೇಕ ಕಲಾವಿದರ ಪಾಲ್ಗೊಳ್ಳುವಿಕೆಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.
ಯತಿರಾಜ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ ಮತ್ತು ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಚೈತ್ರಾ ಶ್ರೀನಿವಾಸ್, ಚರಣ್ ಕಾಸಲ, ಸೋನು ಸಾಗರ, ಬುಲೆಟ್ ರಾಜು, ಬಸವರಾಜ್, ಜೀವನ್ ರಾಜ್, ಮಂಜುನಾಥ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿನು ಮನಸು ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಜೀವನ್ ರಾಜ್ ಛಾಯಾಗ್ರಹಣ ಹಾಗೂ ಶಶಿಕುಮಾರ್ ಅವರ ಸಹ ನಿರ್ದೇಶನವಿದೆ.