Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಗಣ`` ನಾಯಕನಾಗಿ ಪ್ರಜ್ವಲ್ ದೇವರಾಜ್
Posted date: 01 Sat, Jan 2022 06:00:10 PM
ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ``ಗಣ`` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ. 

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ  ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌. 

ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಗಣ`` ನಾಯಕನಾಗಿ ಪ್ರಜ್ವಲ್ ದೇವರಾಜ್ - Chitratara.com
Copyright 2009 chitratara.com Reproduction is forbidden unless authorized. All rights reserved.