Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕೆಜಿಎಫ್ ಚಾಪ್ಟರ್​ 2 ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ
Posted date: 03 Thu, Mar 2022 08:50:19 PM
ಕೊನೆಗೂ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್​ನಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ.
ರಾಕಿಂಗ್ ಸ್ಟಾರ್​ ಯಶ್ ನಾಯಕನಾಗಿ ನಟಿಸಿರುವ ಈ ಚಿತ್ರದ ಮೊದಲ ಭಾಗ ಈಗಾಗಲೇ ಹೊಸ ಇತಿಹಾಸವನ್ನೇ ಬರೆದಿದೆ. ಇದೀಗ ಅದರ ಮುಂದುವರಿದ ಭಾಗದ ಮೇಲಿನ ಕುತೂಹಲಕ್ಕೂ ದಿನಗಣನೆ ಶುರುವಾಗಿದ್ದು, ಏ. 14ರಂದು ವಿಶ್ವದಾದ್ಯಂತ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. 
ಎಲ್ಲ ಅಂದುಕೊಂಡಂತೆ ಆಗಿದ್ದರೆ, ಕಳೆದ ವರ್ಷವೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಬಿಡುಗಡೆಯನ್ನು ಮುಂದೂಡಲ್ಪಟ್ಟಿತ್ತು. ಇದೀಗ ಅದೆಲ್ಲದಕ್ಕೂ ಉತ್ತರ ಎಂಬಂತೆ ಸಿನಿಮಾ ಕಳೆದ ಸಲ ಘೋಷಿಸಿದ ದಿನದಂದೇ ತೆರೆಗೆ ಬರುತ್ತಿದೆ. ಹೊಂಬಾಳೆ ಸಿನಿಮಾ ಸಂಸ್ಥೆಯ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.  ಎರಡನೇ ಭಾಗದಲ್ಲಿ ಸಂಜಯ್ ದತ್, ರವೀನಾ ಟಂಡನ್ ಸೇರಿ ಸ್ಟಾರ್ ಕಲಾವಿದರ ದಂಡೇ ಇದೆ.
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕೆಜಿಎಫ್ ಚಾಪ್ಟರ್​ 2 ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ - Chitratara.com
Copyright 2009 chitratara.com Reproduction is forbidden unless authorized. All rights reserved.