Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅನೇಕ ಗಣ್ಯರ ಉಪಸ್ಥಿತಿಯಲ್ಲಿ``ಹೋಮ್ ಮಿನಿಸ್ಟರ್`` ಹಾಡುಗಳ ಬಿಡುಗಡೆ
Posted date: 20 Sun, Mar 2022 01:11:26 PM
ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ ``ಹೋಮ್ ಮಿನಿಸ್ಟರ್`` ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಅದಕ್ಕೂ ಮುನ್ನ ಜಿಬ್ರಾನ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ.

ಸಚಿವ ಮುನಿರತ್ನ, ಗೋಲ್ಡನ್‌ ಸ್ಟಾರ್ ಗಣೇಶ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ‌ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.

ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಯಿತು. ಚಿತ್ರದ ಕಥೆ ಕೇಳಿದಾಗ ನನಗೆ ಒಂದು ಕಡೆ ಇಷ್ಟವಾಗುತ್ತಿದೆ. ಮತ್ತೊಂದು ಕಡೆಯಿಂದ ಭಯ. ಜನ ಈ ಕಥೆಯನ್ನು ಯಾವರೀತಿ ತೆಗೆದುಕೊಳ್ಳುತ್ತಾರೋ? ಎಂದು.ಕೊನೆಗೆ ನಿರ್ಮಾಪಕ ಪೂರ್ಣಚಂದ್ರ ನಾಯ್ಡು ಅವರು, ಈ ಸಿನಿಮಾ ಮಾಡೋಣ ಸರ್. ಎಲ್ಲರಿಗೂ ಹಿಡಿಸುತ್ತದೆ ಎಂದು ಭರವಸೆ ನೀಡಿದರು. ಇದೇ ಏಪ್ರಿಲ್ ಒಂದರಂದು ಚಿತ್ರ ಬಿಡುಗಡೆಯಾಗುತ್ತಿದೆ. ಜನ ಮೆಚ್ಚಿಕೊಳ್ಳುತ್ತಾರೆಂಬ ನಿರೀಕ್ಷೆಯಿದೆ. ನನ್ನೊಂದಿಗೆ ನಟಿಸಿರುವ ವೇದಿಕ , ತಾನ್ಯ ಹೋಪ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಮ್ಮ ಕರೆಗೆ ಓಗೊಟ್ಟು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ ಎಂದರು ಉಪೇಂದ್ರ.

ಚಿತ್ರದಲ್ಲಿ ನಟಿಸಿರುವ ವೇದಿಕ, ತಾನ್ಯ ಹೋಪ್, ಚಾಂದಿನಿ, ವಿನಯ್ ಚಂಡೂರ್,  ಸಂಭಾಷಣೆ ಬರೆದಿರುವ ಧರ್ಮೇಂದ್ರ, ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು , ಶ್ರೀಕಾಂತ್ ವೀರಮಾಚನೇನಿ ಹಾಗೂ ಚಿತ್ರವನ್ನು      ಬಿಡುಗಡೆ ಮಾಡುತ್ತಿರುವ  ಬೆಂಗಳೂರು ಕುಮಾರ್ ಫಿಲಂಸ್ ನ ಕುಮಾರ್   ``ಹೋಮ್ ಮಿನಿಸ್ಟರ್``ಕುರಿತು ಮಾತನಾಡಿದರು.

ಸುಜಯ್ ಕೆ ಶ್ರೀಹರಿ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ವೇದಿಕ, ತಾನ್ಯ ಹೋಪ್, ಚಾಂದಿನಿ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕ ಅವಿನಾಶ್, ಲಾಸ್ಯ ಮುಂತಾದವರಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅನೇಕ ಗಣ್ಯರ ಉಪಸ್ಥಿತಿಯಲ್ಲಿ``ಹೋಮ್ ಮಿನಿಸ್ಟರ್`` ಹಾಡುಗಳ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.