Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಹಿರ ಖ್ಯಾತಿಯ ಮಹೇಶ್ ಗೌಡ ನಿರ್ದೇಶನದಲ್ಲಿ `ಬಿಳಿ ಚುಕ್ಕಿ ಹಳ್ಳಿ ಹಕ್ಕಿ`
Posted date: 03 Sun, Apr 2022 07:46:48 PM
ಈ ಹಿಂದೆ ಮಹಿರ ಎಂಬ ಸಿನಿಮಾ ಬಂದಿತಲ್ಲ. ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ಸೇರಿದಂತೆ ಒಂದಷ್ಟು ಪ್ರತಿಭಾನ್ವಿತರು ನಟಿಸಿದ್ದ..ತಾಯಿ ಮಗಳ ಹೋರಾಟದ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ಮಹೇಶ್ ಗೌಡ ಈ ಬಾರಿ ಯಾರು ಮಾಡಿರದ.. ಹೊಸ ಪ್ರಯತ್ನದ ಸಿನಿಮಾವೊಂದಕ್ಕೆ ಕೈ ಹಾಕಿದ್ದಾರೆ. ಅದರ ಮೊದಲ ಭಾಗವೆಂಬಂತೆ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ನ್ನು ಯುಗಾದಿ ಹಬ್ಬದ ಸ್ಪೆಷಲ್ ಆಗಿ ರಿಲೀಸ್ ಮಾಡಿದ್ದಾರೆ.

ದಿನೇಶ್ ಪಾತ್ರದಲ್ಲಿ ಮಹೇಶ್  `ಬಿಳಿ ಚುಕ್ಕಿ ಹಳ್ಳಿ ಹಕ್ಕಿ` ಮಹೇಶ್ ಗೌಡ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಈ ಸಿನಿಮಾಗೆ ತಾವೇ ಕಥೆ ಬರೆದು ಆಕ್ಷನ್ ಕಟ್ ಹೇಳುವುದರ ಜೊತೆಗೆ ತಮ್ಮದೇ ಹೊನ್ನುಡಿ ಪ್ರೊಡಕ್ಷನ್ ನಡಿ ಮಹೇಶ್ ಚಿತ್ರಕ್ಕೆ ಬಂಡವಾಳ ಹಾಕ್ತಿದ್ದು, ಜೊತೆ ದಿನೇಶ್ ಎಂಬ ಪಾತ್ರ ಪೋಷಣೆ ಮಾಡ್ತಿದ್ದಾರೆ. ಹಳ್ಳಿ ಹುಡ್ಗಿ ಕವಿತಾ ಆಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಮಹೇಶ್ ಗೆ ಜೋಡಿಯಾಗಿ ಬಣ್ಣ ಹಚ್ಚಿದ್ದಾರೆ.  

ನಾಯಕ ದಿನೇಶ್ ತೊನ್ನು(ವಿಟಿಲಿಗೋ) ಸಮಸ್ಯೆ ಇರುತ್ತೇ. ಆತ ಪಕ್ಕದ ಊರಿನ ಚೆಂದದ ಮುದ್ದು ಮುದ್ದಾದ ಹುಡ್ಗಿ ಕವಿತಾಳನ್ನು ವರಿಸ್ತಾರೆ. ಸಮಸ್ಯೆ ಗೊತ್ತಿದ್ರೂ ಕವಿತಾ ತನ್ನನ್ನ ಮದ್ವೆಯಾಗೋದೇ` ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜಾನರ್ ಚಿತ್ರವಾಗಿದ್ದು, ಪಕ್ಕಾ ಮನರಂಜನೆ ನೀಡಲಿದೆ.

ಮಹೇಶ್ ಗೌಡ ತಮ್ಮದೇ ತೊನ್ನಿನ ಸಮಸ್ಯೆಯನ್ನು ಇಲ್ಲಿ ಕಥೆಯಾಗಿ ಪರಿವರ್ತಿಸಿದ್ದಾರೆ. ಇಂತಹ ಸಿನಿಮಾಗಳನ್ನು ತೆರೆಮೇಲೆ ಮಾಡೋದು ಕಷ್ಟವೇ ಸರಿ. ಅಂತಹ ಸಾಹಸಕ್ಕೆ ಮುಂದಾಗಿರುವ ಮಹೇಶ್ ಗೌಡ ಕಾರ್ಯಕ್ಕೆ ಶಹಬ್ಬಾಸ್ ಹೇಳಲೇಬೇಕು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಹಿರ ಖ್ಯಾತಿಯ ಮಹೇಶ್ ಗೌಡ ನಿರ್ದೇಶನದಲ್ಲಿ `ಬಿಳಿ ಚುಕ್ಕಿ ಹಳ್ಳಿ ಹಕ್ಕಿ` - Chitratara.com
Copyright 2009 chitratara.com Reproduction is forbidden unless authorized. All rights reserved.