Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಾತಿನಮನೆಯಲ್ಲಿ ``ಲಂಕಾಸುರ``
Posted date: 07 Thu, Apr 2022 08:15:40 AM
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, `` ಲಂಕಾಸುರ`` ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. 

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ ಬಾಕಿಯಿದೆ. ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರಂತೆ. 

ಈ ಹಿಂದೆ ``ಮೂರ್ಕಲ್ ಎಸ್ಟೇಟ್`` ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. 

ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ.  ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ  ಚಿತ್ರದ ಸಾಹಸ ನಿರ್ದೇಶಕರು. 

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಾತಿನಮನೆಯಲ್ಲಿ ``ಲಂಕಾಸುರ`` - Chitratara.com
Copyright 2009 chitratara.com Reproduction is forbidden unless authorized. All rights reserved.