Chief Editor
Manohar. R (Manu)
Photo Journalist
chitrataramanu@gmail.com
+91 9845549026
ಶೋಕಿವಾಲನಿಗೆ ಸಾಥ್ ನೀಡಲು ಬಂದ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರು
Posted date: 21 Thu, Apr 2022 11:12:24 AM
ಶೋಕಿವಾಲನಿಗೆ ಸಾಥ್ ನೀಡಲು ಬಂದ ಸ್ಯಾಂಡಲ್ ವುಡ್  ಸ್ಟಾರ್ ನಿರ್ದೇಶಕರು

ಅಜಯ್ ರಾವ್ ನಾಯಕರಾಗಿ ನಟಿಸಿರುವ "ಶೋಕಿವಾಲ" ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಈ ಹಾಡಿನ ವಿಶೇಷತೆ ಏನೆಂದರೆ ನಾಯಕ ಅಜಯ್ ರಾವ್ ಅವರೊಂದಿಗೆ  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್, ಹರಿ ಸಂತೋಷ್, ಶಶಾಂಕ್, ವಿ.ನಾಗೇಂದ್ರ ಪ್ರಸಾದ್ ಹೆಜ್ಜೆ ಹಾಕಿದ್ದಾರೆ.  ಎಲ್ಲಾ ದಿಗ್ಗಜರ ಸಮಾಗಮದಲ್ಲಿ ಮೂಡಿಬಂದಿರುವ ಈ ಹಾಡು ಜನಮನಸೂರೆಗೊಂಡು, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. 
 
ಈ ಹಾಡನ್ನು ಚೇತನ್ ಕುಮಾರ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ.  ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

 ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಹಾಡು ಬಿಡುಗಡೆ ಸಮಾರಂಭ ನಡೆಯಿತು.
 ಹಾಡಿನಲ್ಲಿ ನಟಿಸಿರುವ ನಿರ್ದೇಶಕರುಗಳೇ ಈ ಹಾಡನ್ನು ರೀಲಿಸ್ ಮಾಡಿದ್ದು ವಿಶೇಷ,
ವಿ.ನಾಗೇಂದ್ರಪ್ರಸಾದ್, ನಂದಕಿಶೋರ್, ಹರಿ ಸಂತೋಷ್, ಚೇತನ್ ಕುಮಾರ್, ಮಹೇಶ್ ಕುಮಾರ್ ರವರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. 
5 ಜನ ನಿರ್ದೇಶಕರನ್ನು ಚಿತ್ರ ತಂಡದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
 
ಇದೆ ತಿಂಗಳ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾವಾಗಿದೆ. ಎಲ್ಲರು ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ T.R.ಚಂದ್ರಶೇಖರ್.
 
"ಜಾಕಿ" ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ನವೀನ್ ಕುಮಾರ್ ಈ ಚಿತ್ರದ ಛಾಯಾಗ್ರಹಕರು. 

ಅಜಯ್ ರಾವ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಅರುಣ ಬಾಲರಾಜ್, ತಬಲಾ ನಾಣಿ, ಪ್ರಮೋದ್ ಶೆಟ್ಟಿ, ಗಿರಿ, ನಾಗರಾಜ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಕಿಶೋರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಶೋಕಿವಾಲನಿಗೆ ಸಾಥ್ ನೀಡಲು ಬಂದ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರು - Chitratara.com
Copyright 2009 chitratara.com Reproduction is forbidden unless authorized. All rights reserved.