Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಮೆಲ್ಲುಸಿರೆ ಸವಿಗಾನ`` ಹಾಡಿಗೆ ರೀಷ್ಮಾ ನಾಣಯ್ಯ ಹೆಜ್ಜೆ
Posted date: 01 Thu, Sep 2022 09:18:45 PM
ಕ್ರಿಯಾಶೀಲ ನಿರ್ದೇಶಕ ಭರತ್ ಜಿ ನಿರ್ದೇಶಿಸುತ್ತಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. 

ಪೋಸ್ಟರ್, ಫಸ್ಟ್ ಲುಕ್ ಮೂಲಕ ಈಗಾಗಲೇ ಜನಮನ ಗೆದ್ದಿರುವ "ಸ್ಪೂಕಿ ಕಾಲೇಜ್" ಚಿತ್ರದ ಹಾಡೊಂದಕ್ಕೆ "ಏಕ್ ಲವ್ ಯಾ" ಬೆಡಗಿ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

ಡಾ||ರಾಜಕುಮಾರ್ ಅಭಿನಯದ "ವೀರಕೇಸರಿ" ಚಿತ್ರದ "ಮೆಲ್ಲುಸಿರೆ ಸವಿಗಾನ" ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನೂತನ ಶೈಲಿಯಲ್ಲಿ ಈ ಹಾಡು ಮೂಡಿಬಂದಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ರೀಷ್ಮಾ ನಾಣಯ್ಯ ಅದ್ಭುತವಾಗಿ ನೃತ್ಯ ಮಾಡಿದ್ದಾರೆ. 

 ಈ ಹಾಡನ್ನು ನಾವು ಬಲವಂತವಾಗಿ ತುರುಕಿಲ್ಲ. ಚಿತ್ರದ ಕಥೆಯನ್ನು ಹೇಳುವ ಹಾಡೊಂದು ಬೇಕಿತ್ತು. "ಮೆಲ್ಲುಸಿರೆ ಸವಿಗಾನ" ಹಾಡನ್ನು ಕೇಳಿದಾಗ, ಈ ಅದ್ಭುತ ಹಾಡು ಸೂಕ್ತ ಎನಿಸಿತು. ಹಾಗಾಗಿ ಈ ಹಾಡನ್ನು ಆಯ್ಕೆ ಮಾಡಿಕೊಂಡೆವು.
ದಾಂಡೇಲಿಯ ಅರಣ್ಯ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅದ್ಭುತ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದು ಮಾಹಿತಿ ನೀಡಿರುವ ನಿರ್ದೇಶಕ ಭರತ್, ಹಾಡು ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕ ಹೆಚ್.ಕೆ. ಪ್ರಕಾಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. 

ಈ ಹಾಡಿನಲ್ಲಿ ಅಭಿನಯಿಸುವುದಕ್ಕೆ ರೀಷ್ಮಾ ನಾಣಯ್ಯ ಸಾಕಷ್ಟು ತಯಾರಿ ಮಾಡಿಕೊಂಡಿದರಂತೆ‌. ಅಣ್ಣವ್ರು ಅಭಿನಯಿಸಿದ್ದ ಜನಪ್ರಿಯ ಹಾಡಿಗೆ ನಾನು ನೃತ್ಯ ಮಾಡಿರುವುದು ಖುಷಿಯಾಗಿದೆ ಎನ್ನುತ್ತಾರೆ ರೀಷ್ಮಾ ನಾಣಯ್ಯ.

"ಸ್ಪೂಕಿ ಕಾಲೇಜ್" ನ ಬಹುತೇಕ ಚಿತ್ರೀಕರಣ ಧಾರವಾಡದ ನೂರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ನಡೆದಿದೆ. ಅರಣ್ಯ ಭಾಗದ ಚಿತ್ರೀಕರಣವನ್ನು ದಾಂಡೇಲಿಯಲ್ಲಿ ಚಿತ್ರಿಸಲಾಗಿದೆ.ಆನಂತರ
ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ.
.
"ರಂಗಿತರಂಗ" , "ಅವನೇ ಶ್ರೀಮನ್ನಾರಾಯಣ" ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

  ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ
ಭರತ್ ಅವರೆ ಬರೆದಿದ್ದಾರೆ. 

ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ. 

 "ಪ್ರೀಮಿಯರ್ ಪದ್ಮಿನಿ" ಖ್ಯಾತಿಯ ವಿವೇಕ್ ಸಿಂಹ "ಸ್ಪೂಕಿ ಕಾಲೇಜ್" ನ ನಾಯಕ. "ದಿಯಾ" ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ "ಕಾಮಿಡಿ ಕಿಲಾಡಿಗಳು" ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಮೆಲ್ಲುಸಿರೆ ಸವಿಗಾನ`` ಹಾಡಿಗೆ ರೀಷ್ಮಾ ನಾಣಯ್ಯ ಹೆಜ್ಜೆ - Chitratara.com
Copyright 2009 chitratara.com Reproduction is forbidden unless authorized. All rights reserved.